Saturday, September 19, 2026

BDA Apartments

ರಾಜಭವನ ಚಲೋ: ರಾಜ್ಯಪಾಲರ ವಿರುದ್ದ ಕಾಂಗ್ರೆಸ್ ಪ್ರತಿಭಟನೆ, ಆಕ್ರೋಶ BDA JK_Adv BDA Adv
Home Front Page ರಾಜಭವನ ಚಲೋ: ರಾಜ್ಯಪಾಲರ ವಿರುದ್ದ ಕಾಂಗ್ರೆಸ್ ಪ್ರತಿಭಟನೆ, ಆಕ್ರೋಶ

ರಾಜಭವನ ಚಲೋ: ರಾಜ್ಯಪಾಲರ ವಿರುದ್ದ ಕಾಂಗ್ರೆಸ್ ಪ್ರತಿಭಟನೆ, ಆಕ್ರೋಶ

ಬೆಂಗಳೂರು,ಆಗಸ್ಟ್,31,2024 (www.justkannada.in): ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ದ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ ರಾಜ್ಯಪಾಲರ ನಡೆ ವಿರುದ್ದ ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರ ಅನುಮತಿ ಖಂಡಿಸಿ ಕೆಪಿಸಿಸಿ ಅಧ್ಯಕ್ಷ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ರಾಜಭವನ ಚಲೋ ನಡೆಯುತ್ತಿದ್ದು ಸಿಎಂ ಸಿದ್ದರಾಮಯ್ಯ, ಸಚಿವರಾದ ಪರಮೇಶ್ವರ್, ಪ್ರಿಯಾಂಕ್ ಖರ್ಗೆ, ಹೆಚ್.ಕೆ ಪಾಟೀಲ್ ಸೇರಿ ಸಚಿವರು ಎಲ್ಲಾ ಶಾಸಕರು, ಸಂಸದರು, ಎಂಎಲ್ ಸಿಗಳು ಭಾಗವಹಿಸಿದ್ದಾರೆ.

ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸಿದ್ದು  ರಾಜ್ಯಪಾಲರು ತೊಲಗಲಿ ಎಂದು ಘೋಷಣೆ ಕೂಗಿ ಭಿತ್ತಿಪತ್ರ ಹಿಡಿದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಾಜಭವನ ಚಲೋ ಮೂಲಕ ತೆರಳಿ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ, ಮುರುಗೇಶ್ ನಿರಾಣಿ, ಜನಾರ್ದನ ರೆಡ್ಡಿ ವಿರುದ್ದವೂ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡುವಂತೆ ಮನವಿ ಸಲ್ಲಿಸಲಿದ್ದಾರೆ.

Key words: Raj Bhavan Chalo,  Congress, protest, against, Governor