ರಾಜಸ್ಥಾನ, ಮಧ್ಯಪ್ರದೇಶ: ಕಮಲ ಪಕ್ಷದತ್ತ ‘ಮ್ಯಾಜಿಕ್ ನಂಬರ್’ !

ಬೆಂಗಳೂರು, ಡಿಸೆಂಬರ್ 03, 2023 (www.justkannada.in): ಪಂಚ ರಾಜ್ಯಗಳ ವಿಧಾನ ಸಭೆ ಚುನಾವಣೆ ಬಿಜೆಪಿ ಮತ್ತು ಕಾಂಗ್ರೆಸ್‌ಗೆ ತೀವ್ರ ಜಿದ್ದಾಜಿದ್ದಿನ ಪ್ರತಿಷ್ಠೆಯ ಕಣವಾಗಿದೆ.

ಸದ್ಯದ ಟ್ರೆಂಡ್ ಪ್ರಕಾರ ಕಾಂಗ್ರೆಸ್ ತೆಲಂಗಾಣದಲ್ಲಿ ಮತ್ತೆ ತನ್ನ ಅಸ್ತಿತ್ವ ಸ್ಥಾಪಿಸುವುದು ಖಚಿತವಾಗುತ್ತಿದೆ. ಛತ್ತೀಸ್‌ಗಢವನ್ನು ಕೈ ಪಕ್ಷ ಉಳಿಸಿಕೊಳ್ಳುವ ಸಾಧ್ಯತೆಯಿದೆ. ಸದ್ಯದ ಮಾಹಿತಿ ಪ್ರಕಾರ ರಾಜಸ್ಥಾನ ಮತ್ತು ಮಧ್ಯ ಪ್ರದೇಶದಲ್ಲಿ ಮತದಾರರು ಮತ್ತೆ ಬಿಜೆಪಿಗೆ ಜೈ ಎಂದಿರುವುದು ಗೊತ್ತಾಗುತ್ತಿದೆ.

ರಾಜಸ್ಥಾನದಲ್ಲಿ ಸದ್ಯ 109 ಕ್ಷೇತ್ರಗಳಲ್ಲಿ ಕಮಲ ಪಕ್ಷ ಮೇಲುಗೈ ಸಾಧಿಸಿದೆ. ಕಾಂಗ್ರೆಸ್ 76 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ.

ಮಧ್ಯ ಪ್ರದೇಶದ ಒಟ್ಟು 230 ಕ್ಷೇತ್ರಗಳ ಪೈಕಿ ಸದ್ಯದ ಮಾಹಿತಿ ಪ್ರಕಾರ 136 ಕ್ಷೇತ್ರಗಳಲ್ಲಿ ಬಿಜೆಪಿ, 90 ಕ್ಷೇತ್ರಗಳಲ್ಲಿ ಕೈ ಪಕ್ಷದ ಅಭ್ಯರ್ಥಿಗಳು ಮುನ್ನಡೆ ಸಾಧಿಸಿದ್ದಾರೆ.