Sunday, August 23, 2026

BDA Apartments

Home Front Page ರಾಜೀವ್ ಗಾಂಧಿ 79ನೇ ಜನ್ಮದಿನ: ಕಾಂಗ್ರೆಸ್’ನಿಂದ ಮಾಜಿ ಪ್ರಧಾನಿ ಸ್ಮರಣೆ

ರಾಜೀವ್ ಗಾಂಧಿ 79ನೇ ಜನ್ಮದಿನ: ಕಾಂಗ್ರೆಸ್’ನಿಂದ ಮಾಜಿ ಪ್ರಧಾನಿ ಸ್ಮರಣೆ

ನವದೆಹಲಿ, ಆಗಸ್ಟ್ 20, 2023 (www.justkannada.in): ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ 79ನೇ ಜನ್ಮದಿನದ ಅಂಗವಾಗಿ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರು ವೀರ ಭೂಮಿಯಲ್ಲಿರುವ ರಾಜೀವ್ ಸ್ಮಾರಕಕ್ಕೆ ನಮನ ಸಲ್ಲಿಸಿದ್ದಾರೆ.

ಕಾಂಗ್ರೆಸ್ ಪಕ್ಷ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ, ರಾಬರ್ಟ್ ವಾದ್ರಾ ಮತ್ತು ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ನಾಲ್ಕು ದಿನಗಳ ಲಡಾಖ್ ಪ್ರವಾಸದಲ್ಲಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ತಮ್ಮ ತಂದೆ ಹಾಗೂ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರನ್ನು ನೆನಪಿಸಿಕೊಂಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಕೂಡ ರಾಜೀವ್ ಗಾಂಧಿ ಅವರಿಗೆ ಗೌರವ ನಮನ ಸಲ್ಲಿಸಿದ್ದಾರೆ. ಇಂದು ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ ಜನ್ಮ ವಾರ್ಷಿಕೋತ್ಸವ. ಈ ಸಂದರ್ಭದಲ್ಲಿ ಅವರಿಗೆ ನನ್ನ ಗೌರವ ನಮನಗಳು ಎಂದು ಪ್ರಧಾನಿ ಮೋದಿ ಟ್ವೀಟ್‌ ಮಾಡಿದ್ದಾರೆ.