Wednesday, July 29, 2026

BDA Apartments

Home Front Page ದೀಪಾ ಮಲಿಕ್ ಗೆ ರಾಜೀವ್ ಗಾಂಧಿ ಖೇಲ್ ರತ್ನ ಪ್ರಶಸ್ತಿ ಪ್ರದಾನ

ದೀಪಾ ಮಲಿಕ್ ಗೆ ರಾಜೀವ್ ಗಾಂಧಿ ಖೇಲ್ ರತ್ನ ಪ್ರಶಸ್ತಿ ಪ್ರದಾನ

ನವದೆಹಲಿ, ಆಗಸ್ಟ್ 30, 2019 (www.justkannada.in): ಪ್ಯಾರಾಲಿಂಪಿಕ್ ಬೆಳ್ಳಿ ಪದಕ ವಿಜೇತೆ ದೀಪಾ ಮಲಿಕ್ ಗೆ ರಾಷ್ಟ್ರಪತಿ ರಾಮನಾಥ್ ಕೊವಿಂದ್ ರಾಜೀವ್ ಗಾಂಧಿ ಖೇಲ್ ರತ್ನ ಪ್ರಶಸ್ತಿ ನೀಡಿ ಗೌರವಿಸಿದ್ದಾರೆ.

ಈ ಪ್ರಶಸ್ತಿ ಪಡೆದ ಭಾರತದ ಮೊದಲ ಮಹಿಳಾ ಪ್ಯಾರಾ-ಅಥ್ಲೀಟ್ ಮತ್ತು ಅತ್ಯಂತ ಹಿರಿಯ ಆಟಗಾರ್ತಿ ಎಂಬ ಹೆಗ್ಗಳಿಕೆಗೆ ಪಾತ್ರರಾದರು.

2016 ರ ರಿಯೊ ಪ್ಯಾರಾಲಿಂಪಿಕ್ಸ್‌ನಲ್ಲಿ ಶಾಟ್ ಪುಟ್ ಎಫ್ 53 ವಿಭಾಗದಲ್ಲಿ ಬೆಳ್ಳಿ ಪದಕ ಗೆದ್ದ ಮಲಿಕ್ ರಾಜೀವ್ ಗಾಂಧಿ ಖೇಲ್ ರತ್ನ ಪ್ರಶಸ್ತಿ ಪಡೆದ ಎರಡನೇ ಪ್ಯಾರಾ ಒಲಂಪಿಕ್ ಪಟು ಎನ್ನುವ ಖ್ಯಾತಿಗೆ ಪಾತ್ರರಾಗಿದ್ದಾರೆ.