ಚಿಕ್ಕಬಳ್ಳಾಪುರ,ಜನವರಿ,26,2026 (www.justkannada.in): ಶಿಡ್ಲಘಟ್ಟ ಪೌರಾಯುಕ್ತೆ ಅಮೃತಾ ಗೌಡ ಅವರಿಗೆ ಧಮ್ಕಿ, ಜೀವ ಬೆದರಿಕೆ ಹಾಕಿದ್ದ ಕಾಂಗ್ರೆಸ್ ಮುಖಂಡ ರಾಜೀವ್ ಗೌಡರನ್ನು ಕೊನೆಗೂ ಪೊಲೀಸರು ಬಂಧಿಸಿದ್ದಾರೆ.
ಕೇರಳದ ಗಡಿಯಲ್ಲಿ ರಾಜೀವ್ ಗೌಡ ಬಂಧನವಾಗಿದ್ದು ಪೊಲೀಸರು ಚಿಕ್ಕಬಳ್ಳಾಪುರಕ್ಕೆ ಕರೆ ತರುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಚಿಕ್ಕಬಳ್ಳಾಪುರದ ಶಿಡ್ಲಘಟ್ಟ ಪೌರಾಯುಕ್ತೆ ಅಮೃತಾ ಗೌಡ ಅವರಿಗೆ ಬ್ಯಾನರ್ ತೆರವು ಸಂಬಂಧ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ನಿಂದಿಸಿ, ಧಮ್ಕಿ ಹಾಕಿದ್ದರು. ಈ ಸಂಬಂಧ ಪೌರಾಯುಕ್ತೆ ಅಮೃತಾಗೌಡ ದೂರು ನೀಡಿದ್ದರು. ರಾಜೀವ್ ಗೌಡ ವಿರುದ್ದ ಎಫ್‌ಐಆರ್ ದಾಖಲಾಗಿತ್ತು.
ದೂರಿನ ಬಳಿಕ ಬಂಧನ ಭೀತಿಯಿಂಧ ತಲೆಮರೆಸಿಕೊಂಡಿದ್ದ ರಾಜೀವ್ ಗೌಡರನ್ನು ಕೊನೆಗೂ ಕೇರಳ ಗಡಿಯಲ್ಲಿ ಪೊಲೀಸರು ಬಂಧಿಸಿದ್ದಾರೆ. ಈಗಾಗಲೇ ಕೆಪಿಸಿಸಿ ಶಿಸ್ತುಸಮಿತಿಯು ರಾಜೀವ್ ಗೌಡರನ್ನು ಕಾಂಗ್ರೆಸ್ ಪಕ್ಷದಿಂದ ಅಮಾನತು ಮಾಡಿದೆ. ಎಫ್ ಐಆರ್ ರದ್ದುಕೋರಿ ರಾಜೀವ್ ಗೌಡ ಹೈಕೋರ್ಟ್ ಮೆಟ್ಟಿಲೇರಿದ್ದರು. ಅರ್ಜಿಯನ್ನ ಹೈಕೋರ್ಟ್ ವಜಾಗೊಳಿಸಿತ್ತು.
Key words: threatened, Officer, Rajiv Gowda, finally, arrested







