ರಾಜ್ಯ ಸಭಾ ಚುನಾವಣೆ: ಎಲ್ಲಾ ನಾಮಪತ್ರಗಳು ಕ್ರಮಬದ್ಧ..

ಬೆಂಗಳೂರು, ಜೂನ್ 1,2022(www.justkannada.in) :  ಜೂನ್ 10 ರಂದು ಕರ್ನಾಟಕ ರಾಜ್ಯದಿಂದ ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ಚುನಾವಣೆ ನಡೆಯಲಿದ್ದು ನಿನ್ನೆ ನಾಮಪತ್ರ ಸಲ್ಲಿಕೆ ಕಡೆಯ ದಿನಾಂಕವಾಗಿತ್ತು. ಈ ಮಧ್ಯೆ ಸಲ್ಲಿಸಿರುವ ಎಲ್ಲಾ ನಾಮಪತ್ರಗಳು ಕ್ರಮಬದ್ಧವಾಗಿವೆ ಎಂದು ಚುನಾವಣಾಧಿಕಾರಿಗಳೂ ಆದ ಕರ್ನಾಟಕ ವಿಧಾನಸಭೆಯ ಕಾರ್ಯದರ್ಶಿ ಎಂ ಕೆ ವಿಶಾಲಾಕ್ಷಿ ಅವರು ತಿಳಿಸಿದ್ದಾರೆ.

ಈ ಕುರಿತು ಮಾಹಿತಿ ನೀಡಿರುವ ಅವರು, ಕರ್ನಾಟಕ ರಾಜ್ಯದಿಂದ ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ  ಸ್ವೀಕೃತವಾಗಿರುವ ಭಾರತೀಯ ಜನತಾ ಪಕ್ಷದ ಮೂವರು, ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಇಬ್ಬರು ಹಾಗೂ ಜಾತ್ಯತೀತ ಜನತಾದಳದ ಓರ್ವ ಅಭ್ಯರ್ಥಿ ನಾಮಪತ್ರಗಳೂ ಒಳಗೊಂಡಂತೆ ಎಲ್ಲಾ ಆರು ಅಭ್ಯರ್ಥಿಗಳ ನಾಮಪತ್ರಗಳು ಕ್ರಮಬದ್ಧವಾಗಿವೆ ಹಾಗೂ ಅಂಗೀಕೃತವಾಗಿವೆ ಎಂದು ಹೇಳಿದ್ದಾರೆ.

ಬಿಜೆಪಿಯಿಂದ ಮೊದಲ ಅಭ್ಯರ್ಥಿಯಾಗಿ ನಿರ್ಮಲಾ ಸೀತಾರಾಮನ್, 2ನೇ ಅಭ್ಯರ್ಥಿಯಾಗಿ ಜಗ್ಗೇಶ್, ಮೂರನೇ ಅಭ್ಯರ್ಥಿಯಾಗಿ ಲೇಹರ್ ಸಿಂಗ್ ಕಣದಲ್ಲಿದ್ದಾರೆ. ಕಾಂಗ್ರೆಸ್ ನಿಂದ ಮೊದಲ ಅಭ್ಯರ್ಥಿಯಾಗಿ ಜೈರಾಮ್ ರಮೇಶ್, 2ನೇ ಅಭ್ಯರ್ಥಿಯಾಗಿ ಮನ್ಸೂರ್ ಖಾನ್, ಜೆಡಿಎಸ್ ನಿಂದ ಕುಪೇಂದ್ರ ರೆಡ್ಡಿ ಕಣಕ್ಕಿಳಿದಿದ್ದಾರೆ.

Key words: rajya sabha-Elections- All -nominations