ರಾಜ್ಯಸಭೆ ಚುನಾವಣೆ: ಬಿಜೆಪಿ ಅಭ್ಯರ್ಥಿಯಾಗಿ ನಿರ್ಮಲಾ ಸೀತಾರಾಮನ್ ನಾಮಪತ್ರ ಸಲ್ಲಿಕೆ.

ಬೆಂಗಳೂರು,ಮೇ,31,2022(www.justkannada.in):  ಜೂನ್ 10 ರಂದು ರಾಜ್ಯದಿಂದ ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ಚುನಾವಣೆ ನಡೆಯಲಿದ್ದು,  ಬಿಜೆಪಿ ಅಭ್ಯರ್ಥಿಯಾಗಿ ಇಂದು ನಿರ್ಮಲಾ ಸೀತಾರಾಮನ್ ನಾಮಪತ್ರ ಸಲ್ಲಿಕೆ ಮಾಡಿದರು.

ವಿಧಾನಸಭೆ ಕಾರ್ಯದರ್ಶಿ ವಿಶಾಲಾಕ್ಷಿಗೆ ನಿರ್ಮಲಾ ಸೀತಾರಾಮನ್ ನಾಮಪತ್ರ ಸಲ್ಲಿಸಿದರು.  ಈ ವೇಳೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಸಚಿವರುಗಳಾದ ಮಾಧುಸ್ವಾಮಿ, ಆರ್.ಅಶೋಕ್, ಮುನಿರತ್ನ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಉಪಸ್ಥಿತರಿದ್ದರು.

ಇನ್ನು ಬಿಜೆಪಿಯಿಂದ 2ನೇ ಅಭ್ಯರ್ಥಿಯಾಗಿ ಜಗ್ಗೇಶ್ , 3ನೇ ಅಭ್ಯರ್ಥಿಯಾಗಿ ಲೇಹರ್ ಸಿಂಗ್ ಸ್ಪರ್ಧಿಸುತ್ತಿದ್ದಾರೆ.

Key words: Rajya Sabha-elections-Nirmala Sitharaman- nominated –BJP-candidate