ರಾಜ್ಯಸಭಾ ಚುನಾವಣೆಯಲ್ಲಿ ಯಾರಿಗೆ ವೋಟ್..? ತನ್ನ ನಿಲುವು ಸ್ಪಷ್ಟಪಡಿಸಿದ ಶಾಸಕ ಜಿ.ಟಿ ದೇವೇಗೌಡ.

0
3

ಮೈಸೂರು,ಜೂನ್,9,2022(www.justkannada.in):  ಮೈತ್ರಿ ಸರ್ಕಾರ ಪತನವಾದ ನಂತರ ಜೆಡಿಎಸ್ ಕಾರ್ಯಕ್ರಮಗಳಿಂದ ದೂರ ಉಳಿದು ಕಾಂಗ್ರೆಸ್ ಸೇರ್ಪಡೆ ಬಗ್ಗೆ ಸುಳಿವು ನೀಡಿದ್ಧ ಶಾಸಕ ಜಿ.ಟಿ ದೇವೇಗೌಡರು ಇದೀಗ ನಾಳೆ ನಡೆಯುವ ರಾಜ್ಯಸಭಾ ಚುನಾವಣೆಯಲ್ಲಿ ಮತ ನೀಡುವ ಬಗ್ಗೆ ತಮ್ಮ ನಿಲುವು ಸ್ಪಷ್ಟಪಡಿಸಿದ್ದಾರೆ.

ಹೌದು   ರಾಜ್ಯಸಭಾ ಚುನಾವಣೆಯಲ್ಲಿ ನಾನು ಜೆಡಿಎಸ್ ಅಭ್ಯರ್ಥಿಗೆ ಮತ ಹಾಕುತ್ತೇನೆ ಎಂದು ಚಾಮುಂಡೇಶ್ವರಿ ಕ್ಷೇತ್ರದ ಜೆಡಿಎಸ್ ಶಾಸಕ ಜಿ. ಟಿ. ದೇವೇಗೌಡ ಹೇಳಿಕೆ ನೀಡಿದ್ದಾರೆ. ಈ ಕುರಿತು ಮಾತನಾಡಿರುವ ಅವರು, ನಾನು ಜೆಡಿಎಸ್ ನಿಂದ ಅಧಿಕೃತವಾಗಿ ಆಯ್ಕೆಯಾಗಿದ್ದೇನೆ. ನನ್ನ ಆತ್ಮಸಾಕ್ಷಿಗನುಗುಣವಾಗಿ ಜೆಡಿಎಸ್ ಅಭ್ಯರ್ಥಿಗೆ ಮತ ಹಾಕುತ್ತೇನೆ ಎಂದಿದ್ದಾರೆ.mysore-district-mla-gt-deve-gowda-expressed-doubts-death

ಜೆಡಿಎಸ್ ಅಭ್ಯರ್ಥಿ ಕುಪೇಂದ್ರ ರೆಡ್ಡಿ ನನಗೆ ಮತ ಹಾಕುವಂತೆ ಮನವಿ ಮಾಡಿದ್ದಾರೆ.  ಹೆಚ್. ಡಿ. ಕುಮಾರಸ್ವಾಮಿ ಸಹ ಕೇಳಿದ್ದಾರೆ, ನನ್ನ ಬೆಂಬಲಿಗರು ಕ್ಷೇತದ ಮುಖಂಡರ ಅಭಿಪ್ರಾಯವು ಅದೇ ಆಗಿದೆ. ಈ ಎಲ್ಲಾ ಕಾರಣದಿಂದ ನಾನು ಜೆಡಿಎಸ್ ಅಭ್ಯರ್ಥಿಗೆ ಮತ ಹಾಕುತ್ತೇನೆ ಎಂದು ಜಿ.ಟಿ ದೇವೇಗೌಡರು ತಿಳಿಸಿದ್ದಾರೆ.

Key words: Rajya Sabha –elections-Vote -MLA -GT Deve Gowda