Wednesday, October 7, 2026

BDA Apartments

immense respect BDA JK_Adv BDA Adv
Home Front Page ರಾಜ್ಯಸಭೆ ಚುನಾವಣೆ: ಮಾಜಿ ಸಿಎಂ ಹೆಚ್.ಡಿಕೆ, ಬೊಮ್ಮಾಯಿ ಮತದಾನ.

ರಾಜ್ಯಸಭೆ ಚುನಾವಣೆ: ಮಾಜಿ ಸಿಎಂ ಹೆಚ್.ಡಿಕೆ, ಬೊಮ್ಮಾಯಿ ಮತದಾನ.

 ಬೆಂಗಳೂರು,ಫೆಬ್ರವರಿ,27,2024(www.justkannada.in): ಕರ್ನಾಟಕದ 4 ರಾಜ್ಯಸಭಾ ಸ್ಥಾನಗಳಿಗೆ ಮತದಾನ ಆರಂಭಗೊಂಡಿದ್ದು,  ಶಾಸಕರು ಆಗಮಿಸಿ ತಮ್ಮ ಮತ ಚಲಾಯಿಸುತ್ತಿದ್ದಾರೆ.

ಬೆಂಗಳೂರಿನ ವಿಧಾನಸೌಧದ ಕೊಠಡಿ ಸಂಖ್ಯೆ 106ರಲ್ಲಿ ರಾಜ್ಯಸಭಾ ಚುನಾವಣೆಗೆ ಮತದಾನ  ನಡೆಯುತ್ತಿದ್ದು, ಮೊದಲ ಮತವನ್ನೇ ಬಿಜೆಪಿ ಶಾಸಕ ಎಸ್.ಸುರೇಶ್ ಕುಮಾರ್ ಚಲಾಯಿಸಿದರು.

ಕಾಂಗ್ರೆಸ್ ನಿಂದ ಅಜಯ್ ಮಾಕೆನ್, ಸೈಯದ್ ನಾಸೀರ್ ಹುಸೇನ್, ಜಿ.ಸಿ.ಚಂದ್ರಶೇಖರ್, ಬಿಜೆಪಿಯಿಂದ ನಾರಾಯಣಸಾ ಬಾಂಡಗೆ, ಜೆಡಿಎಸ್ ನಿಂದ ಕುಪೇಂದ್ರ ರೆಡ್ಡಿ ಕಣದಲ್ಲಿದ್ದಾರೆ.  ಕಾಂಗ್ರೆಸ್ 134, ಬಿಜೆಪಿ 66, ಜೆಡಿಎಸ್ 19, ಇತರರು 4 ಶಾಸಕರನ್ನು ಹೊಂದಿದ್ದಾರೆ. ಉಳಿದ ನಾಲ್ವರಲ್ಲಿ ಇಬ್ಬರು ಪಕ್ಷೇತರರು ಮತ್ತು ಸರ್ವೋದಯ ಕರ್ನಾಟಕ ಪಕ್ಷದ ದರ್ಶನ್ ಪುಟ್ಟಣ್ಣಯ್ಯ ಅವರ ಬೆಂಬಲವಿದೆ ಎಂದು ಕಾಂಗ್ರೆಸ್ ಹೇಳಿಕೊಂಡಿದೆ ಮತ್ತು ಮೂರು ಸ್ಥಾನಗಳನ್ನು ಗೆಲ್ಲುವ ವಿಶ್ವಾಸವಿದೆ.ರಾಜ್ಯಸಭೆ ಚುನಾವಣೆ: ಮಾಜಿ ಸಿಎಂ ಹೆಚ್.ಡಿಕೆ, ಬೊಮ್ಮಾಯಿ ಮತದಾನ voting

ಇನ್ನು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ, ವಿಪಕ್ಷ ನಾಯಕ ಆರ್.ಅಶೋಕ್, ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಮತಚಲಾಯಿಸಿದ್ದಾರೆ.

Key words: Rajya Sabha- Elections- Voting – four seats-bjp-jds-congress