Sunday, August 16, 2026

BDA Apartments

Home Front Page ರಾಜ್ಯಸಭೆ ಪ್ರತಿ ಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆಗೆ ಕೊರೊನಾ ಸೋಂಕು

ರಾಜ್ಯಸಭೆ ಪ್ರತಿ ಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆಗೆ ಕೊರೊನಾ ಸೋಂಕು

ಬೆಂಗಳೂರು, ಆಗಸ್ಟ್ 14, 2022 (www.justkannada.in): ರಾಜ್ಯಸಭೆ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಕೊರೊನಾ ಸೋಂಕು ಧೃಡಪಟ್ಟಿದೆ.

ಈ ಕುರಿತು ಟ್ವೀಟರ್ ನಲ್ಲಿ ಮಾಹಿತಿ ನೀಡಿರುವ ಅವರು, ಕೊರೊನಾ ಸೋಂಕಿನ ಪರೀಕ್ಷೆಯಲ್ಲಿ ಧನಾತ್ಮಕ ಫಲಿತಾಂಶ ಬಂದಿದೆ ಎಂದು ತಿಳಿಸಿದ್ದಾರೆ.

ಕೊರೊನಾ ಸೋಂಕು ಧೃಡಪಟ್ಟ ಹಿನ್ನೆಲೆಯಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರು ದೆಹಲಿ ಮನೆಯಲ್ಲಿ ಐಸೋಲೇಷನ್ ಆಗಿದ್ದಾರೆ.

ಸೋಂಕಿನ ಹಿನ್ನೆಲೆಯಲ್ಲಿ ಸೋಮವಾರ ದೆಹಲಿಯಲ್ಲಿ ನಡೆಯಲಿರುವ 75ನೇ ಸ್ವಾತಂತ್ರ‍್ಯ ಮಹೋತ್ಸವದ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಾಗುವುದಿಲ್ಲ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರಿಗೆ ಪತ್ರ ಬರೆದಿದ್ದಾರೆ.