ನಮ್ಮ ಗೆಲುವಿಗೆ ಬೇಕಾಗುವಷ್ಟು ಆತ್ಮಸಾಕ್ಷಿಯ ಮತಗಳು ಜೆಡಿಎಸ್, ಬಿಜೆಪಿಯಿಂದ ಬಂದೇ ಬರುತ್ತೆ- ಮಾಜಿ ಸಿಎಂ ಸಿದ್ಧರಾಮಯ್ಯ.

kannada t-shirts

ಮೈಸೂರು,ಜೂನ್,6,2022(www.justkannada.in): ರಾಜ್ಯಸಭಾ ಚುನಾವಣೆಯಲ್ಲಿ ಜೆಡಿಎಸ್ ಮತ್ತು ಬಿಜೆಪಿಯ ಕೆಲ ಆತ್ಮಸಾಕ್ಷಿಯ ಮತಗಳು ಕಾಂಗ್ರೆಸ್ ಬರುತ್ತವೆ. ನಮ್ಮ ಅಭ್ಯರ್ಥಿ ಗೆಲುವಿಗೆ ಎಷ್ಟು ಮತ ಬೇಕೋ ಅಷ್ಟು ಆತ್ಮಸಾಕ್ಷಿಯ ಮತಗಳು ಜೆಡಿಎಸ್, ಬಿಜೆಪಿಯಿಂದ ಕಾಂಗ್ರೆಸ್ ಗೆ ಬಂದೆ ಬರುತ್ತೆ ಎಂದು ವಿ ಪಕ್ಷ ನಾಯಕ ಸಿದ್ಧರಾಮಯ್ಯ ತಿಳಿಸಿದರು.

ಮೈಸೂರಿನಲ್ಲಿ ಇಂದು ಮಾತನಾಡಿದ ಮಾಜಿ ಸಿಎಂ ಸಿದ್ಧರಾಮಯ್ಯ, ಜೆಡಿಎಸ್ ಗೆ ಈಗಲೂ ಬಿಜೆಪಿ ಗೆಲ್ಲಬಾರದು ಎಂಬ ಇಚ್ಚೆ ಇದ್ರೆ ಅವರ ಅಭ್ಯರ್ಥಿಯನ್ನ ಕಣದಿಂದ ನಿವೃತ್ತಿ ಮಾಡಿಸಲಿ. ನಾವು ಅನೇಕ ಬಾರಿ ಜೆಡಿಎಸ್ ಗೆ ನೆರವಾಗಿಲ್ವಾ. ದೇವೇಗೌಡರನ್ನ ರಾಜ್ಯಸಭೆಗೆ ಕಳುಹಿಸುವಾಗ ನಾವು ಬೆಂಬಲಿಸಲಿಲ್ವಾ. ಮೂವತ್ತೇಳು ಸ್ಥಾನ ಇದ್ದ ಜೆಡಿಎಸ್ ಗೆ ನಾವು ಸಿಎಂ ಸ್ಥಾನ ಕೊಡ್ಲಿಲ್ವಾ. ಹೀಗೆ ಹಲವು ಬಾರಿ ಬಿಜೆಪಿಯನ್ನ ಅಧಿಕಾರದಿಂದ ದೂರ ಇಡಲು ನಾವು ಜೆಡಿಎಸ್ ಗೆ ಸಹಕಾರ ಕೊಟ್ಟಿದ್ದೇವೆ. ಈಗ ಅಲ್ಪಸಂಖ್ಯಾತರೊಬ್ಬರು ಗೆಲ್ಲಲು ಜೆಡಿಎಸ್ ತನ್ನ ಅಭ್ಯರ್ಥಿಯ ನಿವೃತ್ತಿ ಘೋಷಿಸಲಿ. ಪ್ರತಿ ಬಾರಿಯೂ ಜೆಡಿಎಸ್ ಯಾಕೆ ಗೆಲ್ಲಬೇಕು.? ಎಂದು ಪ್ರಶ್ನಿಸಿದರು.

ಸಿಎಂ ಇಬ್ರಾಹಿಂ ಜೆಡಿಎಸ್‌ ನಲ್ಲಿ ಕ್ಯಾಪ್ಟೀವ್ ಪ್ರೆಸಿಡೆಂಟ್ ಇದ್ದಂತೆ.

ರಾಜ್ಯಸಭೆ ಚುನಾವಣೆಯಲ್ಲಿ ಬಿಎಸ್‌ ವೈ ಸಿದ್ದರಾಮಯ್ಯ ಒಳ ಒಪ್ಪಂದ ಮಾಡಕೊಂಡಿದ್ದಾರೆಂಬ ಸಿಎಂ ಇಬ್ರಾಹಿಂ ಆರೋಪಕ್ಕೆ ತಿರುಗೇಟು ನೀಡಿದ ಸಿದ್ಧರಾಮಯ್ಯ, ಸಿಎಂ ಇಬ್ರಾಹಿಂಗೆ ಮಾನ ಮರ್ಯಾದೆ ಇಲ್ಲ. ಅವನು ಜೆಡಿಎಸ್‌ ನಲ್ಲಿ ಕ್ಯಾಪ್ಟೀವ್ ಪ್ರೆಸಿಡೆಂಟ್ ಇದ್ದಂತೆ. ಕೂತ್ಕೋ ಅಂದ್ರೆ ಕೂತ್ಕೋಬೇಕು. ನಿಂತ್ಕೊ ಅಂದ್ರೆ ನಿಂತ್ಕೋಬೇಕು ಎಂದು ಲೇವಡಿ ಮಾಡಿದರು.

ಎಂಎಲ್‌ಸಿ ಮಾಡ್ತೀವಿ ಅಂತ ಕರ್ಕೊಂಡು ಹೋದ್ರು, ಎಂಎಲ್‌ ಸಿ ಮಾಡಿದ್ದಾರಾ..?. ಏನೋ ಒಂದು ಹುದ್ದೆ ಕೊಟ್ಟಿದ್ದಾರೆ ಅಂತ ಬಾಯಿಗೆ ಬಂದಂತೆ ಮಾತನಾಡ್ತಾನೆ ಎಂದು ವಾಗ್ದಾಳಿ ನಡೆಸಿದರು.

ಪಠ್ಯಪುಸ್ತಕ ಪರಿಷ್ಕರಣೆ ವಿವಾದ ಕುರಿತು ಪ್ರತಿಕ್ರಿಯಿಸಿದ ಸಿದ್ಧರಾಮಯ್ಯ, ಸಮಿತಿ ವಿಸರ್ಜನೆ ಪರಿಹಾರ ಅಲ್ಲ. ಪರಿಷ್ಕರಣೆಯನ್ನೇ ರದ್ದು ಮಾಡಿ, ಬರಗೂರು ರಾಮಚಂದ್ರಪ್ಪ ಅವರ ಪರಿಷ್ಕರಣೆಯೇ ಜಾರಿಯಾಗಲಿ. ಹಿಂದೂಗಳ ಭಾವನೆಗೆ ಧಕ್ಕೆಯಾಗುವ ಕೆಲಸ ಮಾಡಿದ್ದಾರೆ. ಕವಿಗಳ, ಮಹಾತ್ಮರ ಕೃತಿಚೌರ್ಯ ನಡೆದಿವೆ. ನಾನು ಹಿಂದೂ ಅಲ್ವ, ಅಂಬೇಡ್ಕರ್ ಹಿಂದೂ ಅಲ್ವ. ಎಲ್ಲರಿಗೂ ಅವಮಾನ ಆಗಿದೆ ಎಂದು ಕಿಡಿಕಾರಿದರು.

ನಾನು ಆರ್ಥಿಕತೆ ಬಗ್ಗೆ ಮಾತನಾಡಿರೋದು ತಪ್ಪು, ಸರಿ ಎಂದು ಹೇಳಲು ಪ್ರತಾಪ್ ಸಿಂಹ ಆರ್ಥಿಕ ತಜ್ಞನಾ?

ಸಿದ್ದರಾಮಯ್ಯಗೆ ಆರ್ಥಿಕತೆ ಏನು ಗೊತ್ತು ಎಂಬ ಸಂಸದ ಪ್ರತಾಪ್ ಸಿಂಹ ಹೇಳಿಕೆಗೆ ತಿರುಗೇಟು ನೀಡಿದ ಸಿದ್ದರಾಮಯ್ಯ, ಹೌದು ನಾನು ಆರ್ಥಿಕ ತಜ್ಞ ಅಲ್ಲ‌‌. ಜಿಲ್ಲಾ ನ್ಯಾಯಾಲಯದಲ್ಲಿ ಪ್ರಾಕ್ಟಿಸ್ ಮಾಡಿರೋ ವಕೀಲ. ಹೈಕೋರ್ಟ್ ಸುಪ್ರೀಂಕೋರ್ಟ್ ನಲ್ಲೂ ಪ್ರಾಕ್ಟಿಸ್ ಮಾಡಿಲ್ಲ. ನಾನು ಆರ್ಥಿಕತೆ ಬಗ್ಗೆ ಮಾತನಾಡಿರೋದು ತಪ್ಪು, ಸರಿ ಎಂದು ಹೇಳಲು ಪ್ರತಾಪ್ ಸಿಂಹ ಆರ್ಥಿಕ ತಜ್ಞನಾ? ಯಡಿಯೂರಪ್ಪ, ಬೊಮ್ಮಾಯಿ ಆರ್ಥಿಕ ತಜ್ಞರೇ…?  ನಾನು ಓದಿದ ಲಾ ಬಗ್ಗೆ ಪ್ರಶ್ನಿಸಲು ಪ್ರತಾಪ್ ಸಿಂಹ, ಮೋದಿ ಇಬ್ಬರೂ ವಕೀಲರಾ.? ಮೋದಿ, ಪ್ರತಾಪ್ ಸಿಂಹನಿಗೆ ಆರ್ಥಿಕತೆ ಬಗ್ಗೆ ಏನು ಗೊತ್ತಾಗುತ್ತದೆ. ಸುಮ್ಮನೆ ಸುಳ್ಳು ಹೇಳಿಕೊಂಡು ತಿರುಗುತ್ತಿದ್ದಾರೆ ಎಂದು ಗುಡುಗಿದರು.

ಬೆಂಗಳೂರು ಮೈಸೂರು ರಾಷ್ಟ್ರೀಯ ಹೆದ್ದಾರಿಗೂ ಪ್ರತಾಪ್ ಸಿಂಹಗೂ ಏನು ಸಂಬಂಧ‌‌. ಪ್ರತಾಪ್ ಸಿಂಹ ಕ್ಷೇತ್ರ ವ್ಯಾಪ್ತಿಯಲ್ಲಿ ಎಷ್ಟು ಕಿಮೀ ಹೆದ್ದಾರಿ ಬರುತ್ತೆ. ನಾನು ಮೈಸೂರಿಗೆ ಏನು ಮಾಡಿದ್ದೇನೆ, ಅವ್ರು ಏನು ಮಾಡಿದ್ದಾರೆ ಚರ್ಚೆಗೆ ಬರಲಿ. ಚರ್ಚೆಗೆ ನಾನು ಬರುವುದಿಲ್ಲ ನಮ್ಮ ಪಕ್ಷದ ವಕ್ತಾರರನ್ನ ಕಳುಹಿಸುತ್ತೇನೆ. ದಾಖಲೆ ಸಮೇತ ಬಂದು ಚರ್ಚೆ ಮಾಡಲಿ. ಮೈಸೂರು ವಿಮಾನ ಉನ್ನತೀಕರಣ ಯಾರ ಕಾಲದಲ್ಲಿ ಆಗಿದ್ದು, ಪ್ರತಾಪ್ ಆ  ಸಿಂಹನಿಗೆ  ಏನು ಗೊತ್ತು ಎಂದು ಸಿದ್ಧರಾಮಯ್ಯ ವಾಗ್ದಾಳಿ ನಡೆಸಿದರು.

ಜೆಡಿಎಸ್‌ನಿಂದ ದಲಿತ, ಖರ್ಗೆ ಅಸ್ತ್ರ ಬಳಕೆ ವಿಚಾರ ಕುರಿತು ಪ್ರತಿಕ್ರಿಯಿಸಿದ ಸಿದ್ಧರಾಮಯ್ಯ, ದಲಿತರಿಗೆ ನಾವು ಏನ್ ಮಾಡಿದ್ದೀವಿ ಅಂತ ಎಲ್ಲರಿಗೂ ಗೊತ್ತು. ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗ ಹೆಚ್ಚು ಆದ್ಯತೆ ಕೊಟ್ಟಿದ್ದು ದಲಿತರಿಗೆ. ದಲಿತರಿಗೆ ಕಾಂಗ್ರೆಸ್‌ ನಲ್ಲಿ ಹೆಚ್ಚು ಸ್ಥಾನಮಾನ ನೀಡಲಾಗಿದೆ. ಹೀಗಾಗಿ ಜೆಡಿಎಸ್‌ ನವರಿಂದ ಹೇಳಿಸಿಕೊಳ್ಳಬೇಕೆನ್ರಿ..? ಎಂದು ಹರಿಹಾಯ್ದರು.

Key words: rajyasabha-JDS –BJP-vote-Former CM-Siddaramaiah.

ENGLISH SUMMARY…

The conscience votes for our victory will definitely come from JDS, BJP: Former CM Siddaramaiah
Mysuru, June 6, 2022 (www.justkannada.in): “The Congress will get a few conscience votes from JDS and BJP for our victory in the Rajya Sabha elections,” observed leader of the opposition Siddaramaiah.
Speaking in Mysuru today, he said, “if the JDS doesn’t want BJPs candidate to win, let it withdraw its candidate. Have we not supported JDS several times earlier? Didn’t we support sending Devegowda to the Rajya Sabha? Didn’t we give CM’s post to the JDS, which had only 37 seats? Thus, we have supported JDS on several occasions. In return, let the JDS withdraw its candidate to help the victory of the minority candidate. Why JDS should win every time?” he questioned
Responding to C.M. Ibrahim’s statement that there is a nexus between BSY and Siddaramaiah, the latter said that C.M. Ibrahim is like a captive president in JDS. “The JDS assured him of making him an MLC. Did they do it? They have given a designation just for namesake,” he added.
Keywords: Leader of the opposition/ Siddaramaiah/ Rajya Sabha elections/ JDS/ Congress

website developers in mysore