Saturday, October 31, 2026

Dasara Wishes

Happy Dasara
Home Front Page ಕಾಗೋಡು ತಿಮ್ಮಪ್ಪರಿಗೆ ರಾಜ್ಯೋತ್ಸವ ಪ್ರಶಸ್ತಿ: ಅಭಿನಂದನೆ ಸಲ್ಲಿಸಿದ ಮಾಜಿ ಸಿಎಂ ಸಿದ್ದರಾಮಯ್ಯ

ಕಾಗೋಡು ತಿಮ್ಮಪ್ಪರಿಗೆ ರಾಜ್ಯೋತ್ಸವ ಪ್ರಶಸ್ತಿ: ಅಭಿನಂದನೆ ಸಲ್ಲಿಸಿದ ಮಾಜಿ ಸಿಎಂ ಸಿದ್ದರಾಮಯ್ಯ

ಕಾಗೋಡು ತಿಮ್ಮಪ್ಪರಿಗೆ ರಾಜ್ಯೋತ್ಸವ ಪ್ರಶಸ್ತಿ: ಅಭಿನಂದನೆ ಸಲ್ಲಿಸಿದ ಮಾಜಿ ಸಿಎಂ ಸಿದ್ದರಾಮಯ್ಯ

ಬೆಂಗಳೂರು,ಅಕ್ಟೋಬರ್,31,2026 (www.justkannada.in):  ಮಾಜಿ ಸ್ಪೀಕರ್ ಹಾಗೂ ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅವರಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾಗಿದ್ದು ಈ ಹಿನ್ನೆಲೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಅಭಿನಂದನೆ ಸಲ್ಲಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಮಾಜಿ ಸಿಎಂ ಸಿದ್ದರಾಮಯ್ಯ, ಸಮಾಜವಾದಿ ಚಿಂತನೆಯ ಹಿನ್ನೆಲೆಯಿಂದ ಬೆಳೆದುಬಂದು, ಜನಪರ ಹೋರಾಟಗಳನ್ನು ಮುನ್ನಡೆಸಿದ್ದ  ಹಿರಿಯ ನಾಯಕ, ಮಾಜಿ ಸಚಿವರಾದ ಕಾಗೋಡು ತಿಮ್ಮಪ್ಪನವರನ್ನು ಈ ಸಾಲಿನ ರಾಜ್ಯೋತ್ಸವ ಪ್ರಶಸ್ತಿ ಆಯ್ಕೆ ಮಾಡಿರುವುದು ವೈಯಕ್ತಿಕವಾಗಿ ಅತ್ಯಂತ ಖುಷಿ ಕೊಟ್ಟಿದೆ.

ಸಾಮಾಜಿಕ ನ್ಯಾಯದ ಸಿದ್ಧಾಂತದಲ್ಲಿ ಅಚಲ ನಂಬಿಕೆ ಹೊಂದಿರುವ ಕಾಗೋಡು ಅವರು, ತಮ್ಮ ಪಾಲಿಗೆ ಒದಗಿಬಂದ ಅಧಿಕಾರ ಮತ್ತು ಅವಕಾಶಗಳನ್ನು ದುರ್ಬಲ ಜನರ ಕಲ್ಯಾಣಕ್ಕಾಗಿಯೇ ವಿನಿಯೋಗಿಸಿದ ತತ್ವನಿಷ್ಠ ನಾಯಕರು ಎಂದು ಬಣ್ಣಿಸಿದ್ದಾರೆ.ಕಾಗೋಡು ತಿಮ್ಮಪ್ಪರಿಗೆ ರಾಜ್ಯೋತ್ಸವ ಪ್ರಶಸ್ತಿ: ಅಭಿನಂದನೆ ಸಲ್ಲಿಸಿದ ಮಾಜಿ ಸಿಎಂ ಸಿದ್ದರಾಮಯ್ಯ

ನಮ್ಮ ಸರ್ಕಾರದ ಅವಧಿಯಲ್ಲಿ ಕಂದಾಯ ಸಚಿವರಾಗಿ ಸೇವೆ ಸಲ್ಲಿಸಿದ್ದ ಅವರು, ಭೂಸುಧಾರಣಾ ಕಾಯ್ದೆಗೆ ತಿದ್ದುಪಡಿ ತಂದು, ‘ವಾಸಿಸುವವನೇ ಮನೆಯೊಡೆಯ’ ಆಗಬೇಕು ಎಂಬ ಆಶಯವನ್ನು ಸಾಕಾರಗೊಳಿಸುವ ನಿಟ್ಟಿನಲ್ಲಿ ಮಹತ್ವದ ಪಾತ್ರ ವಹಿಸಿದ್ದರು. ಶತಮಾನಗಳ ಕಾಲ ತಾಂಡಾಗಳು, ಹಟ್ಟಿಗಳು, ಮಜರೆಗಳಲ್ಲಿ ವಾಸಿಸುತ್ತಾ ಬಂದಿದ್ದ ಸಾವಿರಾರು ಕುಟುಂಬಗಳಿಗೆ ಭೂಒಡೆತನದ ಹಕ್ಕನ್ನು ಕಲ್ಪಿಸಿ, ಅವರ ಬದುಕಲ್ಲಿ ನೆಮ್ಮದಿ ಮೂಡಿಸುವ ನಮ್ಮ ಸರ್ಕಾರದ ಕಾರ್ಯಕ್ಕೆ ಬೆನ್ನೆಲುಬಾಗಿ ನಿಂತವರು ಕಾಗೋಡು ತಿಮ್ಮಪ್ಪನವರು. ಭೂಮಿಯ ಮಾಲೀಕತ್ವ ಮತ್ತು ವಾಸಿಸುವ ಹಕ್ಕು ಸಮಾಜದ ಕಟ್ಟಕಡೆಯ ವ್ಯಕ್ತಿಗೂ ತಲುಪಬೇಕು ಎಂಬ ಅವರ ಜನಪರ ಕಾಳಜಿಯ ಹಿಂದೆ ಅವರು ಬೆಳೆದು ಬಂದ ಪರಿಸರದ ಪ್ರಭಾವವನ್ನು ಮರೆಯಲು ಸಾಧ್ಯವಿಲ್ಲ.

ವಿವಿಧ ಸರ್ಕಾರಗಳಲ್ಲಿ ಸಚಿವರಾಗಿ, ವಿಧಾನಸಭೆಯ ಸಭಾಪತಿಯಾಗಿ ಅವರು ಸಲ್ಲಿಸಿರುವ ಸೇವೆಗಳು ಮತ್ತು ನಡೆಸಿಕೊಂಡ ಬಂದ ಹೋರಾಟಗಳು ಮತ್ತು ಸಾಮಾಜಿಕ ನ್ಯಾಯದ ಬಗೆಗಿನ ಅವರ ಬದ್ಧತೆಯನ್ನು ಗುರುತಿಸಿ ರಾಜ್ಯ ಸರ್ಕಾರ ಈ ಗೌರವಕ್ಕೆ ಆಯ್ಕೆ ಮಾಡಿರುವುದು ಅವರ ದೀರ್ಘಕಾಲದ ಸಾರ್ವಜನಿಕ ಸೇವೆಗೆ ಸಂದ ಮನ್ನಣೆಯಾಗಿದೆ ಎಂದು ಸಿದ್ದರಾಮಯ್ಯ ನುಡಿದಿದ್ದಾರೆ.Rajyotsava Award jk02_new jk02 new

ಆತ್ಮೀಯರಾದ ಕಾಗೋಡು ತಿಮ್ಮಪ್ಪನವರಿಗೆ ನನ್ನ ಹೃತ್ಪೂರ್ವಕ ಅಭಿನಂದನೆಗಳು. ಅವರಿಗೆ ಉತ್ತಮ ಆರೋಗ್ಯ ಮತ್ತು ದೀರ್ಘಾಯುಷ್ಯ ಲಭಿಸಲಿ ಎಂದು ಹಾರೈಸುವುದಾಗಿ ಮಾಜಿ ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

 

English Summary
Title

Kagodu Thimmappa Wins Rajyotsava Award: CM Siddaramaiah Congratulates Veteran Leader

Short Description
Former Karnataka CM Siddaramaiah extended his heartfelt congratulations to veteran leader Kagodu Thimmappa for being honored with the prestigious Karnataka Rajyotsava Award 2026. Recognized for his decades of exemplary public service, the former Speaker is among the 71 achievers selected for the state's highest civilian honor. Upholding his signature simplicity, the veteran politician declined a government helicopter to the Bengaluru ceremony. Consequently, the official award presentation will take place directly at his residence in Sagara, Shivamogga.
Keywords
Rajyotsava Award, Kagodu Thimmappa, Former CM, Siddaramaiah, congratulations