ಬೆಂಗಳೂರು, ಮೇ 12,2025 (www.justkannada.in): ಕಾಮಿಡಿ ಕಿಲಾಡಿಗಳು ಖ್ಯಾತಿಯ ನಟ ರಾಕೇಶ್ ಹೃದಯಾಘಾತದಿಂದ ನಿಧನರಾಗಿದ್ದಾರೆ.
ಕಾಮಿಡಿ ಕಿಲಾಡಿಗಳು ಸೀಸನ್ 3′ ಖ್ಯಾತಿಯ ರಾಕೇಶ್ ಪೂಜಾರಿ (Rakesh Poojary) ಅವರು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಇದು ಅವರ ಆಪ್ತರಿಗೆ ಹಾಗೂ ಅಭಿಮಾನಿಗಳಿಗೆ ಶಾಕಿಂಗ್ ಎನಿಸಿದೆ.
ಮೇ 11ರ ಬೆಳಿಗ್ಗೆ ರಿಷಬ್ ಶೆಟ್ಟಿ ನಿರ್ದೇಶನದ ‘ಕಾಂತಾರ ಚಾಪ್ಟರ್ 1’ರ ಶೂಟ್ ನಲ್ಲಿ ಅವರು ಇದ್ದರು. ನಿನ್ನೆ ನಿಟ್ಟೆ ಸಮೀಪದ ಮೆಹಂದಿ ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಹೃದಯಾಘಾತದಿಂದ ನಿಧನರಾಗಿದ್ದಾರೆ. ಈ ಸಂಬಂಧ ಕಾರ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಟ ರಾಕೇಶ್ ಪೂಜಾರಿ ಹಿಟ್ಲರ್ ಕಲ್ಯಾಣ ಸೇರಿದಂತೆ ಸಿನಿಮಾಗಳು, ಧಾರಾವಾಹಿಗಳಲ್ಲಿ ಕಾಮಿಡಿ ರೋಲ್ ನಲ್ಲಿ ಕಾಣಿಸಿಕೊಂಡಿದ್ದಾರೆ.
ರಾಕೇಶ್ ಪೂಜಾರಿ ಅವರು ಉಡುಪಿ ನಿವಾಸಿಯಾಗಿದ್ದು, ತುಂಬಾ ಕಷ್ಟದ ಜೀವನ ನೋಡಿ, ನಂತರ ಹಾಸ್ಯದ ಮೂಲಕ ಎಲ್ಲರ ಮನ ಗೆದ್ದರು. ತುಂಬಾ ಅವಮಾನಗಳನ್ನು ಮೆಟ್ಟಿ ನಿಂತರು. ರಂಗಭೂಮಿ ಮತ್ತು ಕಿರುತೆರೆ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದ ರಾಕೇಶ್ ಪೂಜಾರಿ ಅವರು ತಮ್ಮ ಅದ್ಭುತ ಹಾಸ್ಯ ಪ್ರತಿಭೆಯಿಂದ ಅನೇಕರ ಮನ ಗೆದ್ದಿದ್ದು, ಅಪಾರ ಸಂಖ್ಯೆಯಲ್ಲಿ ಅಭಿಮಾನಿಗಳನ್ನ ಗಳಿಸಿದ್ದರು.
‘ಕಾಮಿಡಿ ಕಿಲಾಡಿಗಳು’ ವೇದಿಕೆ ರಾಕೇಶ್ ಪೂಜಾರಿ ಅವರ ಬದುಕನ್ನು ಬದಲಿಸಿತು. ‘ಕಾಮಿಡಿ ಕಿಲಾಡಿಗಳು’ ಮೂರನೇ ಸೀಸನ್ ನಲ್ಲಿ ಅವರು ವಿನ್ನರ್ ಆಗಿದ್ದರು. ಹಲವು ವರ್ಷಗಳಿಂದಲೂ ಅವರ ರಂಗಭೂಮಿ, ಕಿರುತೆರೆಯಲ್ಲಿ ಸಕ್ರಿಯರಾಗಿದ್ದರು.
Key words: Comedy Khiladigalu, Rakesh Poojary , passes away