Saturday, September 19, 2026

BDA Apartments

Home Cinema ಕನ್ನಡ, ತೆಲುಗು, ತಮಿಳು, ಮಲಯಾಳಂ, ಹಿಂದಿಯಲ್ಲಿ ಬಿಡುಗಡೆಯಾಗಲಿದೆ ರಕ್ಷಿತ್ ಶೆಟ್ಟಿ ‘777 ಚಾರ್ಲಿ’

ಕನ್ನಡ, ತೆಲುಗು, ತಮಿಳು, ಮಲಯಾಳಂ, ಹಿಂದಿಯಲ್ಲಿ ಬಿಡುಗಡೆಯಾಗಲಿದೆ ರಕ್ಷಿತ್ ಶೆಟ್ಟಿ ‘777 ಚಾರ್ಲಿ’

ಬೆಂಗಳೂರು, ಮೇ 31, 2021 (www.justkannada.in): ರಕ್ಷಿತ್ ಶೆಟ್ಟಿ ಅಭಿನಯದ ಬಹುನಿರೀಕ್ಷಿತ ‘777 ಚಾರ್ಲಿ’ ಸಿನಿಮಾ ಕನ್ನಡ, ತೆಲುಗು, ತಮಿಳು, ಮಲಯಾಳಂ ಹಾಗೂ ಹಿಂದಿ ಭಾಷೆಗಳಲ್ಲಿ ಬಿಡುಗಡೆಯಾಗಲಿದೆ.

ಅಂದಹಾಗೆ ಚಿತ್ರದ ಅಫೀಷಿಯಲ್ ಟೀಸರ್ ‘ಲೈಫ್ ಆಫ್ ಚಾರ್ಲಿ’ ಜೂನ್ 6ಕ್ಕೆ ಬಿಡುಗಡೆಯಾಗಲಿದೆ ಎಂದು ನಟ ರಕ್ಷಿತ್ ಶೆಟ್ಟಿ ತಿಳಿಸಿದ್ದಾರೆ.

ಜೂ.6ರಂದು ರಕ್ಷಿತ್ ಶೆಟ್ಟಿ ಅವರ ಹುಟ್ಟುಹಬ್ಬದ ಹಿನ್ನೆಲೆ ಈ ಟೀಸರ್ ಬಿಡುಗಡೆ ಮಾಡಲಾಗುತ್ತಿದೆ.

ಕಿರಣ್ ರಾಜ್ ನಿರ್ದೇಶನದ ‘777 ಚಾರ್ಲಿ’ ಚಿತ್ರದ ಶೂಟಿಂಗ್ ಹಾಗೂ ಡಬ್ಬಿಂಗ್ ಕಂಪ್ಲೀಟ್ ಆಗಿದ್ದು, ಸದ್ಯ ಪೋಸ್ಟ್ ಪ್ರೊಡಕ್ಷನ್‍ನಲ್ಲಿ ಚಿತ್ರತಂಡ ಫುಲ್ ಬ್ಯುಸಿಯಾಗಿದೆ.