ಡಿಸೆಂಬರ್ ‘ನಂಬಿದ’ ರಕ್ಷಿತ್ ಶೆಟ್ಟಿ! ‘777 ಚಾರ್ಲಿ’ ಬಿಡುಗಡೆ ದಿನಾಂಕ ಫಿಕ್ಸ್!

ಬೆಂಗಳೂರು, ಸೆಪ್ಟೆಂಬರ್ 09, 2021 (www.justkannada.in): ರಕ್ಷಿತ್‌ ಶೆಟ್ಟಿ ನಟನೆಯ ‘777 ಚಾರ್ಲಿ’ ಚಿತ್ರ ಬಿಡುಗಡೆ ದಿನಾಂಕ ನಿಗದಿಯಾಗಿದೆ.

ಡಿಸೆಂಬರ್‌ 31 ಚಿತ್ರವನ್ನು ಥಿಯೇಟರ್ ನಲ್ಲಿ ಬಿಡುಗಡೆ ಮಾಡಲು ಚಿತ್ರತಂಡ ನಿರ್ಧರಿಸಿದೆ. ಅಂದಹಾಗೆ ಡಿಸೆಂಬರ್‌ನಲ್ಲಿ ಬಿಡುಗಡೆಯಾಗುತ್ತಿರುವ ಮೂರನೇ ಸಿನಿಮಾ ಚಾರ್ಲಿ 777.

ಈ ಹಿಂದೆ ‘ಕಿರಿಕ್‌ ಪಾರ್ಟಿ’ ಚಿತ್ರ2016 ಡಿಸೆಂಬರ್‌ 30ರಂದು ತೆರೆಕಂಡರೆ, ‘ಅವನೇ ಶ್ರೀಮನ್ನಾರಾಯಣ’ ಚಿತ್ರ 2019 ಡಿಸೆಂಬರ್‌ 27ರಂದು ತೆರೆಗೆ ಬಂದಿತ್ತು. ಇದೀಗ ‘777 ಚಾರ್ಲಿ’ ಕೂಡಾ ಡಿಸೆಂಬರ್‌ನಲ್ಲೇ ಬಿಡುಗಡೆಯಾಗುತ್ತಿದೆ.

ಯುವ ನಿರ್ದೇಶಕ ಕಿರಣ್‌ ರಾಜ್‌ ಕಥೆ, ಚಿತ್ರಕಥೆ ಬರೆದು ನಿರ್ದೇಶಿಸುತ್ತಿರುವ ‘777 ಚಾರ್ಲಿ’ ಚಿತ್ರದಲ್ಲಿ ರಕ್ಷಿತ್‌ ಶೆಟ್ಟಿಯ ಜೊತೆಗೆ ಲ್ಯಾಬ್ರಡಾರ್‌ ನಾಯಿ ಒಂದು ಪೂರ್ಣ ಪ್ರಮಾಣದ ಪಾತ್ರದಲ್ಲಿ ತೆರೆಮೇಲೆ ಕಾಣಿಸಿಕೊಂಡಿದೆ.

key words: rakshith shetty movie charli 777 release on dec 31