ರಾಮ ಮಂದಿರ ಸ್ಫೋಟಕ್ಕೆ ಸಂಚು ವಿಚಾರ: ಹಿಂದೂ ಸಮಾಜಕ್ಕೆ ದೊಡ್ಡ ಆಘಾತ- ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ.

ಶಿವಮೊಗ್ಗ,ಅಕ್ಟೋಬರ್,20,2022(www.justkannada.in): ರಾಮ ಮಂದಿರ ಸ್ಫೋಟ ಸಂಚು ವಿಚಾರ ಇದು ಹಿಂದೂ ಸಮಾಜಕ್ಕೆ ದೊಡ್ಡ ಆಘಾತವಾಗಿದೆ. ಯಾರಿಂದಲೂ ಸಹ ರಾಮಮಂದಿರ ಸ್ಪೋಟಿಸಲು ಸಾಧ್ಯವಿಲ್ಲ ಎಂದು ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ತಿಳಿಸಿದರು.

ಇಂದು ಶಿವಮೊಗ್ಗದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಕೆ.ಎಸ್ ಈಶ್ವರಪ್ಪ, ಅಯೋಧ್ಯೆಯ ಬಹುದಿನದ ಹಿಂದು ಸಮಾಜದ ಕನಸು ರಾಮಮಂದಿರ ನಿರ್ಮಾಣ ಮಾಡಲಾಗುತ್ತಿದೆ. ಬಹಳ ವೇಗವಾಗಿ ಕಾಮಗಾರಿ ನಡೆಯುತ್ತಿದೆ. ರಾಷ್ಟ್ರದ್ರೋಹಿ ಸಂಘಟನೆ ಪಿಎಫ್ಐ ಅವರ ಪ್ರಯತ್ನ ಬೆಳಕಿಗೆ ಬಂದಿದೆ. ಇದು ಹಿಂದೂ ಸಮಾಜಕ್ಕೆ ದೊಡ್ಡ ಆಘಾತವಾಗಿದೆ ಎಂದರು.

ಪಿಎಫ್ ಐ ಅಲ್ಲ, ರಾವಣನ ವಂಶಸ್ಥರು, ಜಿನ್ನಾ ವಂಶಸ್ಥರು ಬಂದರೂ ಅದು ಆಗಲ್ಲ. ಇದು ಯಾವುದನ್ನು ಕನಸಿನಲ್ಲೂ ನೆನಸಿಕೊಳ್ಳುವುದು ಬೇಡ. ಪ್ರಜಾಪ್ರಭುತ್ವಕ್ಕೆ, ಸಂವಿಧಾನಕ್ಕೆ ನಂಬಿಕೆ ಇರುವ ಪ್ರತಿಯೊಬ್ಬರೂ ಪಿಎಫ್ ಐ ಹೇಳಿಕೆ ಖಂಡನೆ ಮಾಡಬೇಕು.  ಪಿಎಫ್ ಐ  ಸಂಚನ್ನ ಇಡೀ ದೇಶವೇ ಖಂಡಿಸುತ್ತದೆ. ಇಂತಹ ದೇಶದ್ರೋಹಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು  ಎಂದರು.BJP-Minister- KS Eshwarappa-kalburgi

ಎಐಸಿಸಿ ಅಧ್ಯಕ್ಷರಾಗಿ ಮಲ್ಲಿಕಾರ್ಜುನ ಖರ್ಗೆ ಆಯ್ಕೆ ವಿಚಾರ ಕುರಿತು ಪ್ರತಿಕ್ರಿಯಿಸಿದ ಕೆಎಸ್ ಈಶ್ವರಪ್ಪ, ಮಲ್ಲಿಕಾರ್ಜುನ ಖರ್ಗೆ  ಗಾಂಧಿ ಕುಟಂಬದ ರಬ್ಬರ್ ಸ್ಟ್ಯಾಂಪ್ ಆಗಬಾರದು. ಖರ್ಗೆ ಸಾರಥ್ಯದಲ್ಲಿ ಕಾಂಗ್ರೆಸ್ ವಿಪಕ್ಷ ಸ್ಥಾನವನ್ನಾದರೂ ಪಡೆಯಲಿ ಎಂದು ಲೇವಡಿ ಮಾಡಿದರು.

Key words: Ram Mandir-big shock – Hindu society-Former minister -KS Eshwarappa.