ಅಯೋಧ್ಯೆಗೆ ಪ್ರಯಾಣ ಬೆಳೆಸಿದ ರಾಜ್ಯದ ಪ್ರಮುಖ ಮಠಾಧೀಶರು.

ಬೆಂಗಳೂರು, ಜನವರಿ 20,2024(www.justkannada.in): ಜನವರಿ 22 ಸೋಮವಾರ ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ಶ್ರೀರಾಮಲಲ್ಲಾ ಪ್ರಾಣ ಪ್ರತಿಷ್ಟೆ ಕಾರ್ಯಕ್ರಮದಲ್ಲಿ  ಪಾಲ್ಗೊಳ್ಳಲು ಕರ್ನಾಟಕದ ಪ್ರಮುಖ ಮಠಾಧೀಶರು ಅಯೋಧ್ಯೆಗೆ ಪ್ರಯಾಣ ಬೆಳೆಸಿದ್ದಾರೆ.

ಬೆಂಗಳೂರಿನ ಕೆಂಪೇಗೌಡ ಏರ್ ಪೋರ್ಟ್ ನಿಂದ ವಿವಿಧ ಮಠಾಧೀಶರು ಪ್ರಯಾಣ ಬೆಳೆಸಿದ್ದಾರೆ.  ಮಾದರ ಚನ್ನಯ್ಯ ಗುರುಪೀಠ ಚಿತ್ರದುರ್ಗದ ಬಸವಮೂರ್ತಿ ಮಾದಾರ ಚನ್ನಯ್ಯ ಮಹಾಸ್ವಾಮೀಜಿ, ಕಾಗಿನೆಲೆ ಮಹಾ ಸಂಸ್ಥಾನ ಕನಕ ಗುರುಪೀಠದ ನಿರಂಜನಾನಂದ ಮಹಾಸ್ವಾಮಿಜಿ, ಜಗದ್ಗುರು ಕುಂಚಿಟಿಗ ಮಹಾಸಂಸ್ಥಾನ ಮಠ ಹೊಸದುರ್ಗದ ಶಾಂತವೀರ ಮಹಾಸ್ವಾಮೀಜಿ, ಸಿದ್ದರಾಮೇಶ್ವರ ಮಹಾ ಸಂಸ್ಥಾನ ಭೋವಿ ಗುರುಪೀಠ ಚಿತ್ರದುರ್ಗದ ಇಮ್ಮಡಿ ಸಿದ್ದರಾಮಯ್ಯ ಮಹಾಸ್ವಾಮೀಜಿ, ಶ್ರೀ ವಾಲ್ಮೀಕಿ ಗುರುಪೀಠ ರಾಜನಳ್ಳಿ ಹರಿಹರದ ವಾಲ್ಮೀಕಿ ಪ್ರಸನ್ನಾನಂದ ಮಹಾಸ್ವಾಮಿಜಿ, ಮಹಾಸ್ವಾಮೀಜಿ ಪಂಚಮಸಾಲಿ ಗುರುಪೀಠ ಹರಿಹರದ ವಚನಾನಂದ ಸ್ವಾಮೀಜಿ ಮತ್ತು ಮಹಾಸ್ವಾಮೀಜಿ ಭಗೀರಥ ಪೀಠ ಮಧುರೆದ ಪುರುಷೋತ್ತಮಾನಂದ ಪುರಿ ಮಠಾಧೀಶರು ತೆರಳಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಜನವರಿ 22ರಂದು ರಾಮಮಂದಿರ ಉದ್ಘಾಟನೆಯ ನೇರ ಪ್ರಸಾರ ವೀಕ್ಷಿಸಲಿಕ್ಕಾಗಿ ಈಗಾಗಲೇ ಕೇಂದ್ರ ಸರ್ಕಾರಿ ನೌಕರರಿಗೆ ಅರ್ಧ ದಿನ ರಜೆ ಘೋಷಿಸಲಾಗಿದೆ. ಬಿಜೆಪಿ ಆಡಳಿತವಿರುವ ಹಲವು ರಾಜ್ಯಗಳಲ್ಲಿ ಈಗಾಗಲೇ ಸೋಮವಾರ ಸರ್ಕಾರಿ ರಜೆ ಘೋಷಿಸಲಾಗಿದೆ.

Key words: rama mandir-innuagration-state-swamiji’s- traveled – Ayodhya.