Sunday, September 20, 2026

BDA Apartments

ರಾಜ್ಯದಲ್ಲಿ ಬೈಕ್ ಟ್ಯಾಕ್ಸಿ ನಿಲ್ಲಿಸುವಂತೆ ಸಾರಿಗೆ ಸಚಿವ ರಾಮಲಿಂಗಾರೆಡ್ಡ...
Home Front Page ರಾಜ್ಯದಲ್ಲಿ ಬೈಕ್ ಟ್ಯಾಕ್ಸಿ ನಿಲ್ಲಿಸುವಂತೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಆದೇಶ

ರಾಜ್ಯದಲ್ಲಿ ಬೈಕ್ ಟ್ಯಾಕ್ಸಿ ನಿಲ್ಲಿಸುವಂತೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಆದೇಶ

ಬೆಂಗಳೂರು, ಏಪ್ರಿಲ್​ ,26,2025 (www.justkannada.in): ಆಟೋ, ಕ್ಯಾಬ್ ಚಾಲಕರಿಗೆ ಸಿಹಿಸುದ್ದಿ ಸಿಕ್ಕಿದ್ದು ಕರ್ನಾಟಕದಲ್ಲಿ ಬೈಕ್ ಟ್ಯಾಕ್ಸಿ ನಿಲ್ಲಿಸುವಂತೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಆದೇಶ ಹೊರಡಿಸಿದ್ದಾರೆ.

ರಾಜ್ಯದಲ್ಲಿ ರ‍್ಯಾಪಿಡೋ, ಉಬರ್​ ಬೈಕ್​ ಟ್ಯಾಕ್ಸಿ ಸೇವೆಯನ್ನು ಸ್ಥಗಿತಗೊಳಿಸುವಂತೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಆದೇಶ ಹೊರಡಿಸಿದ್ದಾರೆ. ಈ ಬಗ್ಗೆ ಸಾರಿಗೆ ಇಲಾಖೆಯ ಕಾರ್ಯದರ್ಶಿ ಮತ್ತು ಸಾರಿಗೆ ಇಲಾಖೆಯ ಆಯುಕ್ತರಿಗೆ ಪತ್ರ ಬರೆಯಲಾಗಿದ್ದು, ಹೈಕೋರ್ಟ್ ಆದೇಶ ಪಾಲಿಸುವಂತೆ ಸೂಚನೆ ನೀಡಿದ್ದಾರೆ ಎನ್ನಲಾಗಿದೆ

ಮೋಟಾರ್ ಸೈಕಲ್‌ಗಳನ್ನು ಸಾರಿಗೆ ವಾಹನಗಳಾಗಿ ನೋಂದಾಯಿಸಲು 2022 ರಲ್ಲಿ ಸಲ್ಲಿಸಿದ ಅರ್ಜಿಗಳನ್ನು ಪರಿಗಣಿಸುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ಕೋರಿ ಉಬರ್ ಇಂಡಿಯಾ ಸಿಸ್ಟಮ್ಸ್ ಪ್ರೈವೇಟ್ ಲಿಮಿಟೆಡ್, ಎಎನ್‌ಐ ಟೆಕ್ನಾಲಜೀಸ್ ಪ್ರೈವೇಟ್ ಲಿಮಿಟೆಡ್ ಮತ್ತು ಇತರರು ಅರ್ಜಿ ಸಲ್ಲಿಸಿದ್ದರು. ವಿಚಾರಣೆ ಕೈಗೆತ್ತಿಕೊಂಡಿದ್ದ ಹೈಕೋರ್ಟ್​ ಏಪ್ರಿಲ್ – 2 ರಂದು ಆರು ವಾರದೊಳಗೆ ಬೈಕ್ ಟ್ಯಾಕ್ಸಿ ನಿಲ್ಲಿಸುವಂತೆ ಆದೇಶ ನೀಡಿತ್ತು. ಸದ್ಯ ಹೈಕೋರ್ಟ್ ಆದೇಶ ‌ಕಾರ್ಯಾಗತಗೊಳಿಸಲು ಕ್ರಮಕೈಗೊಳ್ಳುವಂತೆ ಸಚಿವ ರಾಮಲಿಂಗರೆಡ್ಡಿ ಸೂಚಿಸಿದ್ದಾರೆ.

Key words: Transport Minister, Ramalinga Reddy, orders, stop, bike taxis