Friday, September 11, 2026

BDA Apartments

Home Front Page ಖಾತೆ ಹಂಚಿಕೆ ಅಸಮಾಧಾನ: ಸಚಿವ ಸ್ಥಾನಕ್ಕೆ ರಾಮಲಿಂಗರೆಡ್ಡಿ ರಾಜೀನಾಮೆ

ಖಾತೆ ಹಂಚಿಕೆ ಅಸಮಾಧಾನ: ಸಚಿವ ಸ್ಥಾನಕ್ಕೆ ರಾಮಲಿಂಗರೆಡ್ಡಿ ರಾಜೀನಾಮೆ

ಬೆಂಗಳೂರು,ಜೂನ್,5,2026 (www.justkannada.in) ರಾಜ್ಯ ಸಚಿವ ಸಂಪುಟದಲ್ಲಿ ಖಾತೆ ಹಂಚಿಕೆ ವಿಚಾರವಾಗಿ ಅಸಮಾಧಾನಗೊಂಡಿರುವ ಸಚಿವ ರಾಮಲಿಂಗರೆಡ್ಡಿ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ್ದಾರೆ.

ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ರಾಮಲಿಂಗರೆಡ್ಡಿಗೆ ಜಲಸಂಪನ್ಮೂಲ ಖಾತೆ ಹಂಚಿಕೆ ಮಾಡಿದ್ದರೂ, ತಮಗೆ ಬೆಂಗಳೂರು ಅಭಿವೃದ್ಧಿಗೆ ಸಂಬಂಧಿಸಿದ ಖಾತೆ ನೀಡದಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.

ಇಂದು ಪತ್ರಿಕಾಗೋಷ್ಠಿ ನಡೆಸಿ ತಮ್ಮ ನಿರ್ಧಾರವನ್ನು ಪ್ರಕಟಿಸಿದ ರಾಮಲಿಂಗರೆಡ್ಡಿ, ಖಾತೆ ಹಂಚಿಕೆ ಕುರಿತು ತಮ್ಮ ಅಸಮಾಧಾನವನ್ನು ಬಹಿರಂಗಪಡಿಸಿದರು. ಸರ್ಕಾರ ಅಸ್ತಿತ್ವಕ್ಕೆ ಬಂದ ಕೆಲವೇ ದಿನಗಳಲ್ಲಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿರುವುದು ರಾಜ್ಯ ರಾಜಕೀಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ.

ಈ ಬೆಳವಣಿಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಸರ್ಕಾರಕ್ಕೆ ಆರಂಭದಲ್ಲೇ ರಾಜಕೀಯ ಸವಾಲಾಗಿ ಪರಿಣಮಿಸಿದ್ದು, ಪಕ್ಷದ ಹಿರಿಯ ನಾಯಕರು ಬಿಕ್ಕಟ್ಟು ಶಮನಕ್ಕೆ ಮುಂದಾಗಿದ್ದಾರೆ.

Key words: RamalingaReddy, KarnatakaPolitics, DK Shivakumar, CabinetCrisis