ರಮೇಶ್ ಜಾರಕಿಹೊಳಿ ಬೆಂಬಲಿಗರಿಂದ  ಟೈರ್ ಗೆ ಬೆಂಕಿ ಹಚ್ಚಿ ಪ್ರತಿಭಟನೆ: ಅಭಿಮಾನಿಯಿಂದ ಆತ್ಮಹತ್ಯೆಗೆ ಯತ್ನ..

ಬೆಳಗಾವಿ,ಮಾರ್ಚ್,5,2021(www.justkannada.in): ರಮೇಶ್ ಜಾರಕಿಹೊಳಿ ರಾಸಲೀಲೆ ಸಿಡಿ ಬಿಡುಗಡೆ ಮಾಡಿದ ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ವಿರುದ್ಧ ರಮೇಶ್ ಜಾರಕಿಹೊಳಿ ಬೆಂಬಲಿಗರ ಆಕ್ರೋಶ ಭುಗಿಲೆದ್ದಿದೆ. ಇಂದು ಸಹ  ಅಭಿಮಾನಿಗಳು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.jk

ಗೋಕಾಕ್ ನಗರದ ಬಸವೇಶ್ವರ ವೃತ್ತದಲ್ಲಿ ರಮೇಶ ಜಾರಕಿಹೊಳಿ‌ ಬೆಂಬಲಿಸಿ ಅಭಿಮಾನಿಗಳು ಟೈರ್ ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸುವ ಮೂಲಕ ಪ್ರತಿಭಟನೆ ನಡೆಸಿದರು. ಈ ವೇಳೆ ರಮೇಶ್ ಜಾರಕಿಹೊಳಿ ಅಭಿಮಾನಿಯೊಬ್ಬ ಬೆಂಕಿಯಲ್ಲಿಯೇ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆಯಿತು.

Ramesh jarakiholi- supporters-protest-gokak
ಕೃಪೆ-internet

ಬೆಂಕಿಯಲ್ಲಿ ಬೀಳುತ್ತಿದ್ದಂತೆ ಕೂಡಲೇ ಧಾವಿಸಿದ ಪೊಲೀಸರು ಆತನನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಬೆಂಕಿಯಲ್ಲಿ ಬಿದ್ಧ ವ್ಯಕ್ತಿಗೆ ಗಾಯಗಳಾಗಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

Key words: Ramesh jarakiholi- supporters-protest-gokak