ಬಿಜೆಪಿ ಬಿಟ್ಟು ಜೆಡಿಎಸ್ ಸೇರುವ ಕುರಿತು ಸ್ಪಷ್ಟನೆ ನೀಡಿದ ರಮೇಶ್ ಜಾರಕಿಹೊಳಿ

ಬೆಂಗಳೂರು, ನವೆಂಬರ್ 20, 2022 (www.justkannada.in): ಬಿಜೆಪಿ ತೊರೆಯುವ ಕುರಿತು ಹರಿದಾಡುತ್ತಿದ್ದ ವದಂತಿಗಳ ಬಗ್ಗೆ ಸ್ವತಃ ರಮೇಶ್ ಜಾರಕಿಹೊಳಿ ಸ್ಪಷ್ಟನೆ ನೀಡಿದ್ದಾರೆ.

ಮಾಜಿ ಸಚಿವ ರಮೇಶ್ ಜಾರಕಿಹೊಳಿ ಬಿಜೆಪಿ ಕಾರ್ಯಕ್ರಮಗಳಿಂದ ದೂರವುಳಿದಿದ್ದು, ಪಕ್ಷ ತೊರೆದು ಜೆಡಿಎಸ್ ಗೆ ಸೇರ್ಪಡೆಯಾಗಲಿದ್ದಾರೆ ಎಂಬ ಮಾತು ಎಲ್ಲೆಡೆ ಹರಿದಾಡುತ್ತಿದ್ದವು.

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ರಮೇಶ್ ಜಾರಕಿಹೊಳಿ, ಯಾವುದೇ ಕಾರಣಕ್ಕೂ ಬಿಜೆಪಿ ಬಿಡುವ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಜೊತೆ ನಾನು ಮಾತನಾಡಿದ್ದು ನಿಜ. ಆದರೆ ಜೆಡಿಎಸ್ ಸೇರುವ ಯೋಚನೆಯಿಲ್ಲ ಎಂದು ತಿಳಿಸಿದ್ದಾರೆ.