ಶಾಸಕ ರಮೇಶ್ ಜಾರಕಿಹೊಳಿಗೆ ಸಚಿವ ಸ್ಥಾನ ನೀಡಿ- ಸಚಿವ ಎಂಟಿಬಿ ನಾಗರಾಜ್

ಬೆಂಗಳೂರು,ಜನವರಿ,24,2022(www.justkannada.in):  ರಾಜ್ಯ ಸಚಿವ ಸಂಪುಟ ವಿಸ್ತರಣೆ ವಿಚಾರ ಮುನ್ನೆಲೆಗೆ ಬಂದ ಬೆನ್ನಲ್ಲೆ  ಶಾಸಕ ರಮೇಶ್ ಜಾರಕಿಹೊಳಿಗೂ ಸಚಿವ ಸ್ಥಾನ ನೀಡಬೇಕು  ಎಂದು ಸಚಿವ ಎಂಟಿಬಿ ನಾಗರಾಜ್  ತಿಳಿಸಿದ್ದಾರೆ.

ಮಾಧ್ಯಮಗಳ ಜತೆ ಮಾತನಾಡಿದ   ಸಚಿವ ಎಂ.ಟಿಬಿ ನಾಗರಾಜ್, ರಮೇಶ್ ಜಾರಕಿಹೊಳಿ ನಮ್ಮ ಜೊತೆಗೆ ರಾಜೀನಾಮೆ ಕೊಟ್ಟು ಬಂದವರು, ಕಾರಣಾಂತರಗಳಿಂದ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಇದೀಗ ಅವರಿಗೂ ಸಚಿವ ಸ್ಥಾನ ನೀಡಬೇಕು ಎಂದು ಆಗ್ರಹಿಸಿದ್ದಾರೆ.

ಸಚಿವ ಸಂಪುಟ ವಿಸ್ತರಣೆ ಅಥವಾ ಪುನರಚನೆ ವಿಚಾರ ಸಿಎಂ ಬಸವರಾಜ ಬೊಮ್ಮಾಯಿ ಹಾಗೂ ಹೈಕಮಾಂಡ್ ಗೆ ಬಿಟ್ಟಿದ್ದು, ಸಚಿವ ಸ್ಥಾನ ನೀಡುವಂತೆ ರಮೇಶ್ ಜಾರಕಿಹೊಳಿ ಅವರ ಒತ್ತಡವೂ ಇದೆ ಎಂದು  ಎಂಟಿಬಿ ನಾಗರಾಜ್ ತಿಳಿಸಿದ್ದಾರೆ.

Key words: ramesh jarkiholi-mtb nagaraj-minister