Sunday, August 23, 2026

BDA Apartments

Home Crime ರಾಮೇಶ್ವರಂ ಕೆಫೆ ಬಾಂಬ್ ಸ್ಪೋಟ ಕೇಸ್: ಓರ್ವನನ್ನು ವಶಕ್ಕೆ ಪಡೆದ ಎನ್ ಐಎ ತಂಡ.

ರಾಮೇಶ್ವರಂ ಕೆಫೆ ಬಾಂಬ್ ಸ್ಪೋಟ ಕೇಸ್: ಓರ್ವನನ್ನು ವಶಕ್ಕೆ ಪಡೆದ ಎನ್ ಐಎ ತಂಡ.

ಬೆಂಗಳೂರು,ಮಾರ್ಚ್,13,2024(www.justkannada.in): ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ  ಎನ್ ಐಎ ತಂಡ ಬಳ್ಳಾರಿ ಮೂಲದ ಓರ್ವನನ್ನು ವಶಕ್ಕೆ ಪಡೆದಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ರಾಮೇಶ್ವರಂ ಕೆಫೆ ಬಾಂಬ್ ಸ್ಪೋಟ ಪ್ರಕರಣದ ತನಿಖೆ ನಡೆಸುತ್ತಿರುವ ಎನ್ ಐಎ ತಂಡ ಬಳ್ಳಾರಿಯಲ್ಲಿ ಬೆಳಿಗ್ಗೆ ನಸುಕಿನ ಜಾವ 4 ಗಂಟೆಗೆ ಶಬ್ಬೀರ್ ಎಂಬಾತನನ್ನು ವಶಕ್ಕೆ ಪಡೆದಿದ್ದು ಹೆಚ್ಚಿನ ವಿಚಾರಣೆಗಾಗಿ ಬೆಂಗಳೂರಿಗೆ ಕರೆತರುತ್ತಿದ್ದಾರೆ ಎನ್ನಲಾಗಿದೆ.

ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ನಡೆದ ಬಾಂಬ್ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್ ಐ ಎ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಂಬರ್ ಬಗ್ಗೆ ಸುಳಿವು ನೀಡಿದ್ರೆ 10 ಲಕ್ಷ ಬಹುಮಾನ ನೀಡುವುದಾಗಿ ಎನ್ ಐ ಎ ಘೋಷಣೆ ಮಾಡಿದೆ.

Key words: Rameshwaram-cafe-bomb-case-NIA