Sunday, September 6, 2026

BDA Apartments

Home Crime ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಕೇಸ್: ಇಬ್ಬರು ಆರೋಪಿಗಳು ಎನ್ ಐಎ ಕಸ್ಟಡಿಗೆ.

ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಕೇಸ್: ಇಬ್ಬರು ಆರೋಪಿಗಳು ಎನ್ ಐಎ ಕಸ್ಟಡಿಗೆ.

ಬೆಂಗಳೂರು, ಏಪ್ರಿಲ್​ , 13, 2024 (www.justkannada.in):  ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ  ಪ್ರಕರಣಕ್ಕೆ ಸಂಬಂಧಿಸಿದಂತೆ   ಬಂಧಿತರಾಗಿರುವ ಬಾಂಬರ್ ಮುಸ್ಸಾವಿರ್ ಹುಸೇನ್ ಶಾಜಿಬ್ ಮತ್ತು ಸ್ಫೋಟದ ಮಾಸ್ಟರ್ ಮೈಂಡ್ ಅಬ್ದುಲ್ ಮತೀನ್ ತಾಹಾನನ್ನು 10 ದಿನಗಳ ಕಾಲ ರಾಷ್ಟ್ರೀಯ ತನಿಖಾ ದಳದ ವಶಕ್ಕೆ ನೀಡಿ ನ್ಯಾಯಾಧೀಶರು ಆದೇಶ ಹೊರಡಿಸಿದೆ ಆದೇಶಿಸಿದ್ದಾರೆ.

ಪ್ರಕರಣ ಸಂಬಂಧ ಪಶ್ಚಿಮ ಬಂಗಾಳದ ಕೊಲ್ಕತ್ತಾದಲ್ಲಿ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳನ್ನ  ಎನ್​​ಐಎ ಅಧಿಕಾರಿಗಳು ಬಂಧಿಸಿ ಬೆಂಗಳೂರಿಗೆ ಕರೆತಂದಿದ್ದಾರೆ. ಇಬ್ಬರು ಉಗ್ರರನ್ನು ಎನ್​ಐಎ ಅಧಿಕಾರಿಗಳು ಮಂಡಿವಾಳದ ಎಫ್​ಎಸ್​ಎಲ್​ ಸೆಂಟರ್​ ಬಳಿಯಿರುವ ಇಂಟ್ರಾಗೇಷನ್​​ ಸೆಲ್​ನಲ್ಲಿ ವಿಚಾರಣೆ ನಡೆಸಿದರು.

ಬಳಿಕ ಬೆಳಿಗ್ಗೆ 10:30 ಕೋರಮಂಗಲದ ರಾಷ್ಟ್ರೀಯ ಕ್ರೀಡಾ ಗ್ರಾಮ ಸಮುಚ್ಚಯದಲ್ಲಿರುವ ನಿವಾಸದಲ್ಲಿ ನ್ಯಾಯಾಧೀಶರ ಮುಂದೆ ಉಗ್ರರನ್ನು ಹಾಜರುಪಡಿಸಿದರು. ನ್ಯಾಯಾಧೀಶರು 10 ದಿನಗಳ ಕಾಲ ಎನ್​ಐಎ ಕಸ್ಟಡಿಗೆ ನೀಡಿ ಆದೇಶ ನೀಡಿದ್ದಾರೆ ಎನ್ನಲಾಗಿದೆ.

Key words: Rameswaram café, accused, NIA