ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್ ಪ್ರಕರಣ: NIA ಅಧಿಕಾರಿಗಳ ಭೇಟಿ, ಪರಿಶೀಲನೆ.

ಬೆಂಗಳೂರು,ಮಾರ್ಚ್,5,2024(www.justkannada.in): ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್ ಪ್ರಕರಣ ಸಂಬಂಧ ಘಟನಾ ಸ್ಥಳಕ್ಕೆ ಎನ್ ಐಎ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.  ರಾಮೇಶ್ವರಂ ನಲ್ಲಿ ಸಂಭವಿಸಿದ್ದ ಬಾಂಬ್ ಬ್ಲಾಸ್ಟ್ ಪ್ರಕರಣದ ತನಿಖೆ ಕೈಗೆತ್ತಿಕೊಂಡಿರುವ ಎನ್ ಐಎ ಅಧಿಕಾರಿಗಳು ಇದೀಗ ಇಂದು ಘಟನಾ ಸ್ಥಳಕ್ಕೆ ಭೇಟಿ ನೀಡಿ ಸ್ಥಳ ಮಹಜರು ನಡೆಸಿದ್ದಾರೆ.  ಕೆಫೆ ಸಿಬ್ಬಂದಿಯಿಂದ ಘಟನೆ ಬಗ್ಗೆ ಅಧಿಕಾರಿಗಳು ವಿಚಾರಣೆ ನಡೆಸಿದ್ದು ಮಾಹಿತಿ ಪಡೆದುಕೊಂಡಿದ್ದಾರೆ.

ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣವನ್ನು UAPA ಅಡಿ ಬೆಂಗಳೂರಿನ ಹೆಚ್ಎಎಲ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ತನಿಖೆಯನ್ನು ಬೆಂಗಳೂರು ಪೊಲೀಸರು ಸಿಸಿಬಿಗೆ ವರ್ಗಾಯಿಸಿದ್ದರು. ಪ್ರಕರಣದ ಗಂಭೀರತೆಯನ್ನು ಅರಿತು ಎನ್ ಐಎ ಸ್ವಪ್ರೇರಿತವಾಗಿ  ಪ್ರಕರಣ ದಾಖಲಿಸಿಕೊಂಡಿದೆ.

Key words: Rameswaram Cafe -Bomb Blast- Case-NIA officials- visit- check.