ಅಯೋಧ್ಯೆಯಲ್ಲಿ ರಾಮಜನ್ಮಭೂಮಿ ವಿವಾದ ಪ್ರಕರಣ: ವಿಚಾರಣೆ ಅಂತ್ಯ: ತೀರ್ಪು ಕಾಯ್ದಿರಿಸಿದ ಸುಪ್ರೀಂಕೋರ್ಟ್…

ನವದೆಹಲಿ,ಅ,16,2019(www.justkannada.in): ಅಯೋಧ್ಯೆಯಲ್ಲಿ ರಾಮಜನ್ಮಭೂಮಿ ವಿವಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಸಂಜೆ ವಿಚಾರಣೆ ಪೂರ್ಣಗೊಂಡಿದ್ದು ಸುಪ್ರೀಂಕೋರ್ಟ್ ತೀರ್ಪನ್ನ ಕಾಯ್ದಿರಿಸಿದೆ.

ಅಯೋಧ್ಯೆ ವಿವಾದ ಪ್ರಕರಣ ಕುರಿತು ಕಳೆದ 40 ದಿನಗಳಿಂದ ಸತತವಾಗಿ ಸುಪ್ರೀಂಕೋರ್ಟ್ ನಲ್ಲಿ ವಿಚಾರಣೆ ನಡೆದಿದೆ.  ಅಕ್ಟೋಬರ್ 17ಕ್ಕೆ ವಿಚಾರಣೆ ಪೂರ್ಣಗೊಳಿಸುವಂತೆ ಸುಪ್ರೀಂಕೋರ್ಟ್ ಸೂಚನೆ ನೀಡಿತ್ತು. ಇದೀಗ ವಿಚಾರಣೆ ಅಂತ್ಯವಾಗಿದ್ದು, ಸಿಜೆಐ ರಂಜನ್ ಗೋಗಯ್ ನೇತೃತ್ವದ ಸಾಂವಿಧಾನಿಕ ಪೀಠ ತೀರ್ಪನ್ನ ಕಾಯ್ದಿರಿಸಿದೆ.

ಈ ಹಿಂದೆ ಅ. 18 ರೊಳಗೆ ವಾದ ಮುಕ್ತಾಯಗೊಳಿಸಲು ಸಿಜೆಐ ಸೂಚಿಸಿದ್ದರು. ಇನ್ನು ತೀರ್ಪು ಶೀಘ್ರವೇ ಹೊರಬೀಳುವ ನಿರೀಕ್ಷೆಯಿದೆ.  ನವೆಂಬರ್​ 17ರ ಒಳಗೆ ಪ್ರಕರಣ ಕುರಿತು ತೀರ್ಪು ಪ್ರಕಟವಾಗಲಿದೆ ಎಂದು ಹೇಳಲಾಗುತ್ತಿದೆ.

Key words: Ramjanmabhoomi controversy – End-  hearing-Supreme Court -reserved -judgment.