Wednesday, August 5, 2026

BDA Apartments

Home Front Page ಇಂದು ಸಂಜೆ ಅಥವಾ ನಾಳೆ ಬೆಳಿಗ್ಗೆ ಎರಡು ಕ್ಷೇತ್ರಗಳ ಟಿಕೆಟ್ ಘೋಷಣೆ- ಸುರ್ಜೇವಾಲ

ಇಂದು ಸಂಜೆ ಅಥವಾ ನಾಳೆ ಬೆಳಿಗ್ಗೆ ಎರಡು ಕ್ಷೇತ್ರಗಳ ಟಿಕೆಟ್ ಘೋಷಣೆ- ಸುರ್ಜೇವಾಲ

ಬೆಂಗಳೂರು,ಮಾರ್ಚ್,21,2026 (www.justkannada.in): ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭೆ ಉಪಚುನಾವಣೆಗೆ ಎರಡು ಕ್ಷೇತ್ರಗಳಿಗೂ ಇಂದು ಸಂಜೆ ಅಥವಾ ನಾಳೆ ಬೆಳಿಗ್ಗೆ ಟಿಕೆಟ್ ಘೋಷಣೆ ಮಾಡುತ್ತೇವೆ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ತಿಳಿಸಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ಇಂದು ಮಾತನಾಡಿದ ರಣದೀಪ್ ಸಿಂಗ್ ಸುರ್ಜೇವಾಲ, ಎರಡು ಕ್ಷೇತ್ರಗಳ ಬಗ್ಗೆ ವ್ಯಾಪಕವಾಗಿ ಚರ್ಚೆ ನಡೆದಿದೆ. ತಡರಾತ್ರಿವರೆಗೆ ಟಿಕೆಟ್  ವಿಚಾರವಾಗಿ ನಾವು ಚರ್ಚೆ ಮಾಡಿದ್ದೇವೆ. ಒಬ್ಬ ಕಾರ್ಯಕರ್ತರ ಅಪಸ್ವರವಿದ್ದರೂ ಪರಿಗಣಿಸುತ್ತೇವೆ ಎಂದರು.

ಇಂದು ಸಂಜೆ ಅಥವಾ ನಾಳೆ ಬೆಳಿಗ್ಗೆ ಎರಡೂ ಕ್ಷೇತ್ರಗಳ ಅಭ್ಯರ್ಥಿಗಳನ್ನ ಘೋಷಿಸುತ್ತೇವೆ ಎಂದು ರಣದೀಪ್ ಸಿಂಗ್ ಸುರ್ಜೇವಾಲ ತಿಳಿಸಿದರು.

Key words: Ticket, announcement, By-Election, Ranadeep singh Surjewala