Thursday, August 6, 2026

BDA Apartments

Home Front Page ಡಿ.ಕೆ ಶಿವಕುಮಾರ್ ಒಡೆತನದ ಶಿಕ್ಷಣ ಸಂಸ್ಥೆಗಳ ಮೇಲೆ ಸಿಬಿಐ ದಾಳಿಗೆ ರಣದೀಪ್ ಸಿಂಗ್ ಸುರ್ಜೇವಾಲ ಖಂಡನೆ.

ಡಿ.ಕೆ ಶಿವಕುಮಾರ್ ಒಡೆತನದ ಶಿಕ್ಷಣ ಸಂಸ್ಥೆಗಳ ಮೇಲೆ ಸಿಬಿಐ ದಾಳಿಗೆ ರಣದೀಪ್ ಸಿಂಗ್ ಸುರ್ಜೇವಾಲ ಖಂಡನೆ.

ಬೆಳಗಾವಿ,ಡಿಸೆಂಬರ್,20,2022(www.justkannada.in): ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಒಡೆತನದ ಶಿಕ್ಷಣ ಸಂಸ್ಥೆಗಳ ಮೇಲೆ ಸಿಬಿಐ ದಾಳಿಗೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಖಂಡನೆ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಬೆಳಗಾವಿಯಲ್ಲಿ ಮಾತನಾಡಿದ ರಣದೀಪ್ ಸಿಂಗ್ ಸುರ್ಜೇವಾಲ, ಕೇಂದ್ರ ಸರ್ಕಾರದಿಂದ ತನಿಖಾ ಸಂಸ್ಥೆಗಳ ದುರ್ಬಳಕೆಯಾಗುತ್ತಿದೆ.

ಅನೈತಿಕ ಮಾರ್ಗದಲ್ಲಿ ಬೊಮ್ಮಾಯಿ ಸರ್ಕಾರ ಬಂದಿದೆ. ರಾಜ್ಯದಲ್ಲಿ ಸಾಕಷ್ಟು ಭ್ರಷ್ಟಾಚಾರ, ನೇಮಕಾತಿ ಹಗರಣಗಳು ನಡೆದಿದೆ. ಆದರೆ ಈ ಬಗ್ಗೆ ಕ್ರಮ ಇಲ್ಲ. ಜನರು ರೈತರ ಸಮಸ್ಯೆ ನಿವಾರಿಸುವಲ್ಲಿ ಸರಕಾರ ವಿಫಲವಾಗಿದೆ ಎಂದು ಕಿಡಿಕಾರಿದರು.

Key words: Randeep Singh Surjewala -condemns -CBI -raid – DK Shivakumar.