ಜು.31 ರಂದು ಮೈಸೂರಿಗೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ- ಆರ್.ಧೃನಾರಾಯಣ್.

ಮೈಸೂರು,ಜುಲೈ,29,2021(www.justkannada.in): ಜುಲೈ 31 ಶನಿವಾರ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಮೈಸೂರಿಗೆ ಬೇಟಿ ನೀಡಲಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್ ಧ್ರುವನಾರಾಯಣ್ ಹೇಳಿದರು.

ಮೈಸೂರಿನ ಕಾಂಗ್ರೆಸ್ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್ ಧ್ರುವನಾರಾಯಣ್, ಶನಿವಾರ ರಣದೀಪ್ ಸಿಂಗ್ ಸುರ್ಜೇವಾಲರವರು ಮೈಸೂರಿಗೆ ಆಗಮಿಸಲಿದ್ದಾರೆ. ಮೈಸೂರು, ಚಾಮರಾಜನಗರ, ಕೊಡಗು, ಹಾಸನ, ಮಂಡ್ಯ ಜಿಲ್ಲೆಗಳ ಮುಖಂಡರ ಜೊತೆ ಮಾತುಕತೆ ನಡೆಸಲಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್, ವಿಧಾನಸಭೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್ ಪಕ್ಷದ ಪ್ರಮುಖ ನಾಯಕರು ಅಂದಿನ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಮುಂಬರುವ ದಿನಗಳಲ್ಲಿ ಕಾಂಗ್ರೆಸ್ ಪಕ್ಷದ ಸಂಘಟನೆ ದೃಷ್ಟಿಯಿಂದ ಮೈಸೂರಿನಲ್ಲಿ ವಿವಿಧ ಜಿಲ್ಲೆಗಳ ಮುಖಂಡರೊಂದಿಗೆ ಚರ್ಚೆ ನಡೆಸಲಿದ್ದಾರೆ ಎಂದರು.

ಕಾಂಗ್ರೆಸ್ ತೊರೆದಿರುವವರು ಮರಳಿ ಪಕ್ಷಕ್ಕೆ ಬಂದರೆ ಏಕಾಏಕಿ ಸೇರ್ಪಡೆ ಮಾಡಿಕೊಳ್ಳುವುದಿಲ್ಲ. ಈ ಬಗ್ಗೆ ಪರಿಶೀಲಿಸಲು ಅಲ್ಲಂ ವೀರಭದ್ರಪ್ಪ ನೇತೃತ್ವದಲ್ಲಿ ಸಮಿತಿ ಇದೆ. ಆ ಸಮಿತಿ ಪರಿಶೀಲಿಸಿ ಮುಂದಿನ ಕ್ರಮ ಕೈಗೊಳ್ಳಲಿದೆ. ಈ ವಿಚಾರದಲ್ಲಿ ಬೇರೆಯವರು ಮಧ್ಯಪ್ರವೇಶಿಸಲು ಅವಕಾಶವಿಲ್ಲ. ಅಲ್ಲಂ ವೀರಭದ್ರಪ್ಪ ನೇತೃತ್ವದ ಸಮಿತಿ ಕೈಗೊಳ್ಳುವ ತೀರ್ಮಾನವೇ ಅಂತಿಮ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್ ಧ್ರುವನಾರಾಯಣ್  ಮಾಹಿತಿ ನೀಡಿದರು.

ENGLISH SUMMARY….

State Cong. In-charge Randeept Singh to visit Mysuru on July 31: R. Dhruvanarayan
Mysuru, July 29, 2021 (www.justkannada.in): KPCC Working President R. Dhruvanarayan today informed that the State Congress In-charge Randeep Singh Surjewala is visiting Mysuru this July 31.
Addressing a press meet in Mysuru today, Dhruvanarayan explained that Randeep Singh would hold discussions with party leaders from Mysuru, Chamarajanagara, Kodagu, Hassan, and Mandya Districts. KPCC President D.K. Shivakumar, Leader of the Opposition in the Assembly Siddaramaiah, and other Congress leaders will participate. The meeting is about organizing the party for the coming days, he informed.
Keywords: R. Dhruvanarayan/ KPCC Working President/ State Congress In-charge/ Randeep Singh Surjewala/ July 31/ visiting/ Mysuru

Key words: Rangeep Singh Surjewala – Mysore – July 31- R. Dhruvanarayan.