Saturday, September 12, 2026

BDA Apartments

ವಿದೇಶಿ ಮಹಿಳೆ ಮೇಲೆ ಅತ್ಯಾಚಾರ ಕೇಸ್: ಕುಟ್ಟ ಹೋಂ ಸ್ಟೇ ಪರವಾನಗಿ ರದ್ದು BDA JK_Adv BD...
Home Crime ವಿದೇಶಿ ಮಹಿಳೆ ಮೇಲೆ ಅತ್ಯಾಚಾರ ಕೇಸ್: ಕುಟ್ಟ ಹೋಂ ಸ್ಟೇ ಪರವಾನಗಿ ರದ್ದು

ವಿದೇಶಿ ಮಹಿಳೆ ಮೇಲೆ ಅತ್ಯಾಚಾರ ಕೇಸ್: ಕುಟ್ಟ ಹೋಂ ಸ್ಟೇ ಪರವಾನಗಿ ರದ್ದು

ಕೊಡಗು,ಏಪ್ರಿಲ್,23,2026 (www.justkannada.in):  ವಿದೇಶಿ ಮಹಿಳೆಯ ಮೇಲೆ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಡಗು ಜಿಲ್ಲೆಯ ಕುಟ್ಟ ಹೋಂ ಸ್ಟೇ ಪರವಾನಗಿಯನ್ನು ಪ್ರವಾಸೋದ್ಯಮ ಇಲಾಖೆಯು ರದ್ದುಗೊಳಿಸಿದೆ  ಎಂಬ ಮಾಹಿತಿ ಲಭ್ಯವಾಗಿದೆ.

ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲೂಕಿನ ಕುಟ್ಟ ಗ್ರಾಮದಲ್ಲಿರುವ ಹೊಂ ಸ್ಟೇಯಲ್ಲಿ ಅಮೆರಿಕ ಮೂಲದ ಮಹಿಳೆಗೆ ಜ್ಯೂಸ್ ನಲ್ಲಿ ಮತ್ತು ಬರುವ ಮಾತ್ರೆ ಹಾಕಿ ಹೋಮ್ ಸ್ಟೇ ಸಿಬ್ಬಂದಿ  ಲೈಂಗಿಕ ದೌರ್ಜನ್ಯವೆಸಗಿದ್ದ ಎಂಬ ಆರೋಪ ಕೇಳಿಬಂದಿದೆ. ಹಾಗೆಯೇ  ಹೋಂ ಸ್ಟೇ ಮಾಲೀಕ ಪ್ರಕರಣ ಮುಚ್ಚಿ ಹಾಕಲು ಯತ್ನಿಸಿದ ಆರೋಪಿಸಲಾಗಿದ್ದು ಸದ್ಯ ಈ ಇಬ್ಬರನ್ನೂ ಈಗಾಗಲೇ ಪೊಲೀಸರು ಬಂಧಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಪ್ರವಾಸೋದ್ಯಮ ಇಲಾಖೆ, ಹೋಂ ಸ್ಟೇಯ ಪರವಾನಗಿಯನ್ನು ರದ್ದುಗೊಳಿಸಿ ಆದೇಶ ಹೊರಡಿಸಿದೆ. ಜಿಲ್ಲೆಯ ಎಲ್ಲಾ ಹೋಂಸ್ಟೇಗಳು ಕಡ್ಡಾಯವಾಗಿ ಪ್ರವಾಸಿಗರ ಸುರಕ್ಷತಾ ನಿಯಮಗಳನ್ನು ಪಾಲಿಸಬೇಕು ಎಂದು ಜಿಲ್ಲಾಡಳಿತ  ಸೂಚಿಸಿದೆ.

Key words: Rape case, foreign woman, kodagu, homestay, license, cancelled