Saturday, August 22, 2026

BDA Apartments

Home Front Page ಅತ್ಯಾಚಾರ ಕೇಸ್ : ಜೈಲಿನಿಂದ ಶಾಸಕ ಮುನಿರತ್ನ ಬಿಡುಗಡೆ

ಅತ್ಯಾಚಾರ ಕೇಸ್ : ಜೈಲಿನಿಂದ ಶಾಸಕ ಮುನಿರತ್ನ ಬಿಡುಗಡೆ

ಬೆಂಗಳೂರು,ಅಕ್ಟೋಬರ್,16,2024 (www.justkannada.in):  ಮಹಿಳೆಯ ಮೇಲೆ ಅತ್ಯಾಚಾರ  ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಮೀನು ಪಡೆದಿರುವ  ಆರ್ ಆರ್ ನಗರದ ಬಿಜೆಪಿ ಶಾಸಕ ಮುನಿರತ್ನ ಇಂದು ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆ ಆಗಿದ್ದಾರೆ.

ಪ್ರಕರಣ ಸಂಬಂಧ ನಿನ್ನೆ ಶಾಸಕ ಮುನಿರತ್ನಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿತ್ತು. ಆದರೆ ಜೈಲು ಅಧಿಕಾರಿಗಳಿಗೆ ಜಾಮೀನು ಪ್ರತಿ ತಡವಾಗಿ ತಲುಪಿತ್ತು. ಹೀಗಾಘಿ ನಿನ್ನೆ ಶಾಸಕ ಮುನಿರತ್ನ ಬಿಡುಗಡೆಯಾಗಿರಲಿಲ್ಲ. ಇದೀಗ ಇಂದು ಬಿಡುಗಡೆಯಾಗಿದ್ದಾರೆ.

ನನ್ನನ್ನು ಹೆದರಿಸಿ ಬೆದರಿಸಿ ಅತ್ಯಾಚಾರ ಎಸಗಿದ್ದಾರೆಂದು ಆರೋಪಿಸಿ ಮಹಿಳೆಯೊಬ್ಬರು ಶಾಸಕ ಮುನಿರತ್ನ ವಿರುದ್ಧ ರಾಮನಗರ ಜಿಲ್ಲೆಯ ಕಗ್ಗಲಿಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಬಳಿಕ ಮುನಿರತ್ನರನ್ನ ಬಂಧಿಸಲಾಗಿತ್ತು.

Key words: Rape case,  MLA, Munirathna, released, jail