Saturday, September 26, 2026

BDA Apartments

ಶಾಸಕ ಮುನಿರತ್ನಗೆ ರಿಲೀಫ್ : ಜಾಮೀನು ಮಂಜೂರು BDA JK_Adv BDA Adv
Home Crime ಶಾಸಕ ಮುನಿರತ್ನಗೆ ರಿಲೀಫ್ : ಜಾಮೀನು ಮಂಜೂರು

ಶಾಸಕ ಮುನಿರತ್ನಗೆ ರಿಲೀಫ್ : ಜಾಮೀನು ಮಂಜೂರು

ಬೆಂಗಳೂರು,ಅಕ್ಟೋಬರ್, 15,2024 (www.justkannada.in):ಮಹಿಳೆಯ ಮೇಲೆ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ  ರಾಜರಾಜೇಶ್ವರಿ ನಗರದ ಬಿಜೆಪಿ ಶಾಸಕ ಮುನಿರತ್ನಗೆ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಈ ಮೂಲಕ ಮುನಿರತ್ನರಿಗೆ ಬಿಗ್ ರಿಲೀಫ್ ಸಿಕ್ಕಂತಾಗಿದೆ.

ಶಾಸಕ ಮುನಿರತ್ನ ವಿರುದ್ದ ನನ್ನ ಮೇಲೆ ಹೆದರಿಸಿ ಬೆದರಿಸಿ ಅತ್ಯಾಚಾರವೆಸಗಿದ್ದಾರೆಂದು ಆರೋಪಿಸಿ ಮಹಿಳೆಯೊಬ್ಬರು ಕಗ್ಗಲಿಪುರ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಶಾಸಕ ಮುನಿರತ್ನ  ಅವರನ್ನು ಬಂಧಿಸಲಾಗಿತ್ತು.

ಈ ಮಧ್ಯೆ ಮುನಿರತ್ನ ಜಾಮೀನು ಕೋರಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಅರ್ಜಿ ಸಲ್ಲಿಸಿದ್ದರು.  ಈ ಅರ್ಜಿ ವಿಚಾರಣೆ ನಡೆಸಿದ ಕೋರ್ಟ್ ಮುನಿರತ್ನ ಅವರಿಗೆ ಜಾಮೀನು ಮಂಜೂರು ಮಾಡಿ ಆದೇಶಿಸಿದೆ.

ಗುತ್ತಿಗೆದಾರನಿಗೆ ನಿಂದನೆ ಮತ್ತು ಜೀವ ಬೆದರಿಕೆ ಹಾಕಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮುನಿರತ್ನ ಅವರನ್ನು ಬಂಧಿಸಲಾಗಿತ್ತು.  ನಂತರ ಜಾಮೀನು ಪಡೆದು ಬಿಡುಗಡೆಯಾದ ಬೆನ್ನಲ್ಲೆ ಮಹಿಳೆಯ ಮೇಲೆ ಅತ್ಯಾಚಾರ ಪ್ರಕರಣದಲ್ಲಿ ಮತ್ತೆ ಪೊಲೀಸರು ಅವರನ್ನು ಬಂಧಿಸಿದ್ದರು.

Key words: Rape case, MLA, Muniratna, Bail,  granted