ಅತ್ಯಾಚಾರ ಕೇಸ್ ನಲ್ಲಿ ಜೀವಾವಧಿ ಶಿಕ್ಷೆ: ಹೈಕೋರ್ಟ್ ಮೆಟ್ಟಿಲೇರಿದ ಪ್ರಜ್ವಲ್ ರೇವಣ್ಣ

ಬೆಂಗಳೂರು,ಸೆಪ್ಟಂಬರ್,29,2025 (www.justkannada.in): ಮನೆಕೆಲಸದಾಕೆ ಮೇಲೆ ಅತ್ಯಾಚಾರ ಪ್ರಕರಣದಲ್ಲಿ ವಿಧಿಸಿರುವ ಜೀವಾವಧಿ ಶಿಕ್ಷೆಯನ್ನ ರದ್ದುಗೊಳಿಸುವಂತೆ ಮನವಿ ಮಾಡಿ ಮಾಜಿ ಸಂಸದ  ಪ್ರಜ್ವಲ್ ರೇವಣ್ಣ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.

ಜೀವಾವಧಿ ಶಿಕ್ಷೆ ವಿಧಿಸಿರುವ  ತೀರ್ಪು ಪ್ರಶ್ನಿಸಿ ಪ್ರಜ್ವಲ್ ರೇವಣ್ಣ ಹೈಕೋರ್ಟಿಗೆ ಮೇಲ್ಮನವಿ ಸಲ್ಲಿಸಿದ್ದಾರೆ. ರಾಜಕೀಯ ದುರುದೇಶದಿಂದ ಮಹಿಳೆಯನ್ನು ಅಸ್ತ್ರವಾಗಿಸಿ ಎಫ್‌ ಐಆರ್ ದಾಖಲಿಸಿದ್ದಾರೆ. ವಿಡಿಯೋ ಇತ್ತು ಎಂದು ಆರೋಪಿಸಲಾದ ಮೊಬೈಲ್ ಅನ್ನೇ ವಶಕ್ಕೆ ಪಡೆದಿಲ್ಲ. ಎಫ್‌ಎಸ್‌ಎಲ್ ವರದಿಯಲ್ಲೂ ವಿರೋಧಭಾಸಗಳಿವೆ ಎಂದು ಮೇಲ್ಮನವಿಯಲ್ಲಿ ಉಲ್ಲೇಖಿಸಿದ್ದಾರೆ.

ಹಾಗೆಯೇ  2023ರಲ್ಲಿ ಫಾರ್ಮ್ ಹೌಸ್ ಗೃಹಪ್ರವೇಶದಲ್ಲಿ ಮಹಿಳೆ ಪಾಲ್ಗೊಂಡಿದ್ದಾರೆ. ಅತ್ಯಾಚಾರವಾಗಿದ್ದರೆ ಮಹಿಳೆ ಗೃಹಪ್ರವೇಶಕ್ಕೆ ಹೇಗೆ ಬರುತ್ತಿದ್ದರು? ಈ ಮಹಿಳೆಯಿಂದ ಮೂರು ವರ್ಷದ ಬಳಿಕ ಪೊಲೀಸರು ದೂರು ಪಡೆದಿದ್ದಾರೆ ಮಹಿಳೆ ಗುರುತಿಸಿಲ್ಲ. ಬ್ಯಾಟರಿ ಮತ್ತು ಪೇಂಟ್ ಇದ್ದ ರೂಮಿನಲ್ಲಿ ಉಡುಪು ಸಿಕ್ಕಿದಂದು ಹೇಳಿದ್ದಾರೆ. ಲಾಕ್ ಆಗಿದ್ದರೂಮಿನಲ್ಲಿ ವೀರ್ಯಾಣುವಿದ್ದ ಬಟ್ಟೆ ಸಿಗಲು ಸಾಧ್ಯವೇ? ಹೀಗಾಗಿ ಜೀವಾವಧಿ ಶಿಕ್ಷೆ ರದ್ದುಗೊಳಿಸುವಂತೆ ಪ್ರಜ್ವಲ್ ರೇವಣ್ಣ ಮೇಲ್ಮನವಿಯಲ್ಲಿ ಮನವಿ ಮಾಡಿದ್ದಾರೆ.

Key words: Life imprisonment, rape case, Prajwal Revanna, High Court