ಬೆಂಗಳೂರು,ಆಗಸ್ಟ್,,2,2025 (www.justkannada.in): ಮನೆಕೆಲಸದಾಕೆ ಕೆಆರ್ ನಗರದ ಮಹಿಳೆ ಮೇಲೆ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಜೀವಾವಧಿ ಶಿಕ್ಷೆ ಪ್ರಕಟಿಸಿ ಬೆಂಗಳೂರು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತೀರ್ಪು ಪ್ರಕಟಿಸಿದೆ.
ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ದೋಷಿ ಎಂದು ನಿನ್ನೆ ಆದೇಶಿಸಿದ್ದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಶಿಕ್ಷೆ ಪ್ರಮಾಣ ಪ್ರಕಟವನ್ನ ಇಂದಿಗೆ ಕಾಯ್ದಿರಿಸಿತ್ತು. ಇದೀಗ ನ್ಯಾಯದೀಶ ಗಜಾನನಭಟ್ ಅವರು ಶಿಕ್ಷೆ ಪ್ರಮಾಣ ಪ್ರಕಟಿಸಿದ್ದಾರೆ.
ಪ್ರಜ್ವಲ್ ರೇವಣ್ಣಗೆ ಜೀವಾವಧಿ ಶಿಕ್ಷೆ ಒಟ್ಟು 11.35 ಲಕ್ಷ ರೂ ದಂಡ ವಿಧಿಸಿ ಆದೇಶಿಸಿದ್ದಾರೆ. ಐಪಿಸಿ ಸೆಕ್ಷನ್ 376(2)(ಕ) ಅಡಿ ಜೀವಾವಧಿ ಶಿಕ್ಷೆ ಪ್ರಕಟಿಸಲಾಗಿದೆ. ದಂಡದ ಹಣದಲ್ಲಿ ಸಂತ್ರಸ್ತೆಗೆ 11 ಲಕ್ಷ ರೂ ನೀಡಬೇಕು ಎಂದು ಆದೇಶಿಸಿದ್ದಾರೆ. ಇಂದಿನಿಂದಲೇ ಪ್ರಜ್ವಲ್ ರೇವಣ್ಣಗೆ ಶಿಕ್ಷೆ ಆರಂಭವಾಗಲಿದೆ.
Key words: Rape case, Prajwal Revanna, sentenced , life imprisonment