ಮೈಸೂರು,ಮೇ,29,2025 (www.justkannada.in): ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಅಪರಾಧಿಗಳಿಗೆ 20 ವರ್ಷ ಜೈಲು ಶಿಕ್ಷೆ ವಿಧಿಸಿ ಮೈಸೂರಿನ 7 ನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಆದೇಶ ಹೊರಡಿಸಿದೆ.
ಆರೋಪಿಗಳಾದ A1 ರಫೀಕ್ ಅಹಮ್ಮದ್ @ ತಲ್ಲಾ , A2 ಮಂಜು @ ಮಂಜುನಾಥ್ ಆರ್, A3 ಮನು @ ಲೇಡಿಸ್ A4 ರೇವಣ್ಣ @ ರೇವ, A5 ಕೃಷ್ಣ ಜೈಲು ಶಿಕ್ಷೆಗೆ ಗುರಿಯಾದವರು. ಮೈಸೂರಿನ ಲಷ್ಕರ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿತ್ತು.
ಅಪರಾಧಿಗಳು ಬಲವಂತವಾಗಿ ಮಹಿಳೆ ಜೊತೆ ಲೈಂಗಿಕ ಕ್ರಿಯೆ ನಡೆಸಿದ್ದರು. ಈ ವೇಳೆ ಮಹಿಳೆ ನೋವು ತಾಳಲಾರದೆ ತೀವ್ರ ಸುಸ್ತಾಗಿ ಸಾವನ್ನಪ್ಪಿದ್ದರು. ಈ ಕುರಿತು ಪ್ರಕರಣ ದಾಖಲಾಗಿತ್ತು. ಈ ಸಂಬಂಧ ಇನ್ಸ್ ಪೆಕ್ಟರ್ ಸುರೇಶ್ ದೋಷಾರೋಪ ಸಲ್ಲಿಸಿದ್ದರು. ಇದೀಗ ಮೈಸೂರಿನ 7 ನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾ. ರಮೇಶ್ ಅವರು ಐವರು ಆರೋಪಿಗಳಿಗೆ ಜೈಲು ಶಿಕ್ಷೆ ವಿಧಿಸಿ ತೀರ್ಪು ಪ್ರಕಟಿಸಿದ್ದಾರೆ.
Key words: rape, murder case, Five criminals, sentenced, Jail, Mysore