ಬಾಲಕಿ ಮೇಲೆ ಅತ್ಯಾಚಾರ ಮತ್ತು ಕೊಲೆ ಹಿನ್ನೆಲೆ: ಘಟನೆ ಖಂಡಿಸಿ ಮೈಸೂರಿನಲ್ಲಿ ಪ್ರತಿಭಟನೆ…..

ಮೈಸೂರು,ಸೆ,20,2019(www.justkannada.in): ಬಳ್ಳಾರಿಯ ವಡ್ಡು ಗ್ರಾಮದಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಮತ್ತು ಕೊಲೆಯ ಘಟನೆಯನ್ನ ಖಂಡಿಸಿ ಮೈಸೂರಿನಲ್ಲಿ ಮಡಿವಾಳರ ಸಂಘದಿಂದ ಪ್ರತಿಭಟನೆ ನಡೆಸಲಾಯಿತು.

ಬಳ್ಳಾರಿಯ ವಡ್ಡು ಗ್ರಾಮದಲ್ಲಿ  ಮಡಿವಾಳ ಸಮಾಜದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ನಡೆದಿತ್ತು. 6 ವರ್ಷದ ರೂಪ ಎಂಬ ಬಾಲಕಿ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಲಾಗಿತ್ತು.  ಘಟನೆಯನ್ನ ಖಂಡಿಸಿ ಮೈಸೂರಿನ ಅಗ್ರಹಾರ ವೃತ್ತದಲ್ಲಿ ಮಡಿವಾಳರ ಸಂಘದ ವತಿಯಿಂದ  ಪ್ರತಿಭಟನೆ ನಡೆಸಲಾಯಿತು.

ಅಪರಾಧಿಗಳಿಗೆ ಕಠಿಣ ಶಿಕ್ಷೆ ನೀಡಬೇಕು. ಹಾಗೂ ಬಾಲಕಿ ಕುಟುಂಬಕ್ಕೆ 25 ಲಕ್ಷ ರೂ. ಪರಿಹಾರ ನೀಡುವಂತೆ ಪ್ರತಿಭಟನಾಕಾರರು ಆಗ್ರಹಿಸಿದರು.

Key words: Rape – murder – girl- Protest -Mysore condemning – incident