ರಾಸಲೀಲೆ ಸಿಡಿ ಪ್ರಕರಣ: ಸಚಿವ ರಮೇಶ್ ಜಾರಕಿಹೊಳಿ ರಾಜೀನಾಮೆಗೆ ಆಗ್ರಹಿಸಿದ ಮಾಜಿ ಸಿಎಂ ಸಿದ್ಧರಾಮಯ್ಯ….

ಬೆಂಗಳೂರು,ಮಾರ್ಚ್,3,2021(www.justkannada.in):  ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಅವರ ರಾಸಲೀಲೆ ಸಿಡಿ ಬಯಲಾಗಿದ್ದು ಇದೀಗ ಈ ಪ್ರಕರಣ ವಿಪಕ್ಷಗಳಿಗೆ ಅಸ್ತ್ರವಾಗಿ ಪರಿಣಮಿಸಿದೆ. ಇನ್ನು ರಾಸಲೀಲೆ ಪ್ರಕರಣದಲ್ಲಿ ಸಿಲುಕಿರುವ ಸಚಿವ ರಮೇಶ್ ಜಾರಕಿಹೊಳಿ ರಾಜೀನಾಮೆಗೆ ವಿಪಕ್ಷ ನಾಯಕ ಸಿದ್ಧರಾಮಯ್ಯ ಆಗ್ರಹಿಸಿದ್ದಾರೆ.

ಈ ಕುರಿತು ಮಾತನಾಡಿರುವ ಮಾಜಿ ಸಿಎಂ ಸಿದ್ಧರಾಮಯ್ಯ, ರಾಜ್ಯ ಸರ್ಕಾರಕ್ಕೆ ಮಾನ ಮರ್ಯಾದೆ ಇದ್ದರೇ ರಮೇಶ್ ಜಾರಕಿಹೊಳಿ ರಾಜೀನಾಮೆ ಕೊಡಿಸಲಿ. ಸಚಿವ ರಮೇಶ್ ಜಾರಕಿಹೊಳಿ ವಿರುದ್ಧ ತಕ್ಷಣ ಎಫ್ ಐ ಆರ್ ದಾಖಲಿಸಬೇಕು. ಕೂಡಲೇ ರಾಜೀನಾಮೆ ಪಡೆಯಬೇಕು ಎಂದು ಹೇಳಿದ್ದಾರೆ.

Former CM- Siddaramaiah- warns- implemented-anugraha
siddaramaih#profile..

ಮೌಲ್ಯಗಳಿಗೆ ಬೆಲೆ ಕೊಡುವುದಾದರೆ ಸಿಎಂ ಬಿ.ಎಸ್.ಯಡಿಯೂರಪ್ಪ ತಕ್ಷಣ ಸಚಿವರ ರಾಜೀನಾಮೆ ಪಡೆಯಬೇಕು ಎಂದು ಸಿದ್ಧರಾಮಯ್ಯ ಆಗ್ರಹಿಸಿದ್ಧಾರೆ.

Key words: Rasalee -CD –case-Former CM Siddaramaiah – resignation -Minister -Ramesh Jarakiholi.