‘ಪುಷ್ಪ’ ಚಿತ್ರದ ರಶ್ಮಿಕಾ ಮಂದಣ್ಣ ಫಸ್ಟ್ ಲುಕ್ ರಿಲೀಸ್

ಬೆಂಗಳೂರು. ಸೆಪ್ಟೆಂಬರ್ 29, 2021 (www.justkannada.in): ರಶ್ಮಿಕಾ ಮಂದಣ್ಣ ಮತ್ತು ಅಲ್ಲು ಅರ್ಜುನ್ ಅಭಿನಯದ ಬಹು ನಿರೀಕ್ಷಿತ ಪ್ಯಾನ್ ಇಂಡಿಯಾ ಚಿತ್ರ ‘ಪುಷ್ಪ’ದ ರಶ್ಮಿಕಾ ಫಸ್ಟ್ ಲುಕ್ ರಿಲೀಸ್ ಆಗಿದೆ.

ರಶ್ಮಿಕಾ ಸೋಷಿಯಲ್ ಮೀಡಿಯಾದಲ್ಲಿ ತಮ್ಮ ಪಾತ್ರದ ಮೊದಲ ಲುಕ್ ಹಂಚಿಕೊಂಡಿದ್ದಾರೆ. ನೂತನ ಲುಕ್​ಗೆ ಅಭಿಮಾನಿಗಳು ಫಿದಾ ಆಗಿದ್ದಾರೆ.

ಚಿತ್ರದಲ್ಲಿ ಖಳನಾಯಕನಾಗಿ ಫಹಾದ್ ಫಾಸಿಲ್ ನಟಿಸುತ್ತಿದ್ದಾರೆ. ಕನ್ನಡದ ಡಾಲಿ ಧನಂಜಯ್ ಕೂಡ ನಟಿಸುತ್ತಿದ್ದಾರೆ.
ಈಗಾಗಲೇ ಚಿತ್ರತಂಡವು ಅಲ್ಲು ಅರ್ಜುನ್ ಹಾಗೂ ಫಹಾದ್ ಫಾಸಿಲ್ ಲುಕ್, ಟೀಸರ್​ಗಳನ್ನು ಬಿಡುಗಡೆ ಮಾಡಿದೆ.

ಒಂದು ಹಾಡು ಕೂಡ ಬಿಡುಗಡೆಯಾಗಿದೆ. ತೆಲುಗಿನ ಖ್ಯಾತ ನಿರ್ದೇಶಕ ಸುಕುಮಾರ್​ ‘ಪುಷ್ಪ’ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ.

key words: Rashmika Mandanna First Look Release Of ‘Pushpa’