ವಿಜಯ್ ದೇವರಕೊಂಡ ಬರ್ತ್ ಡೇಗೆ ಸ್ಪೆಷಲ್ ವಿಶ್ ಮಾಡಿದ ರಶ್ಮಿಕಾ

ಬೆಂಗಳೂರು, ಮೇ 10, 2019 (www.justkannada.in): ನಟ ವಿಜಯ್ ದೇವರಕೊಂಡ ಅವರ ಹುಟ್ಟುಹುಬ್ಬ ಆಚರಿಸಿಕೊಂಡಿದ್ದಾರೆ. ನಟಿ ರಶ್ಮಿಕಾ ಮಂದಣ್ಣ ಅವರಿಗೆ ಡಿಯರ್ ಬಾಬಿ ಎಂದು ಕರೆಯುವ ಮೂಲಕ ಶುಭಾಶಯ ತಿಳಿಸಿದ್ದಾರೆ.

ನಟಿ ರಶ್ಮಿಕಾ ಅವರು ಟ್ವೀಟ್ ಮಾಡುವ ಮೂಲಕ ವಿಜಯ್ ಅವರಿಗೆ ಬರ್ತ್ ಡೇ ವಿಶ್ ಮಾಡಿದ್ದಾರೆ. “ಡಿಯರ್ ಬಾಬಿ ಹ್ಯಾಪಿಯೆಸ್ಟ್ ಬರ್ತ್ ಡೇ ಟು ಯೂ” ಎಂದು ಬರೆದು ಅವರ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ.

ಈ ಹಿಂದೆ ರಶ್ಮಿಕಾ ಹುಟ್ಟುಹಬ್ಬಕ್ಕೂ ವಿಜಯ್ ದೇವರಕೊಂಡ ಸ್ಪೆಷಲ್ ಆಗಿ ವಿಶ್ ಮಾಡಿದ್ದರು. ಈಗ ಅವರ ಬರ್ತ್ ಡೇಗೆ ರಶ್ಮಿಕಾ ಶುಭ ಕೋರಿದ್ದಾರೆ. ಅಸಲಿಗೆ ಇವರಿಬ್ಬರು ಅಭಿನಯಿಸುತ್ತಿರುವ ‘ಡಿಯರ್ ಕಾಮ್ರೇಡ್’ ಸಿನಿಮಾದಲ್ಲಿ ಬರುವ ಪಾತ್ರಗಳ ಹೆಸರಾಗಿದೆ.