ರವಿಚಂದ್ರನ್ ಅವರ ತಾಯಿ ಪಟ್ಟಮ್ಮಾಳ್ ವೀರಸ್ವಾಮಿ ಅಂತ್ಯಕ್ರಿಯೆ ಇಂದು ಸಂಜೆ

ಬೆಂಗಳೂರು, ಫೆಬ್ರವರಿ 28, 2022 (www.justkannada.in): ಖ್ಯಾತ ನಟ, ನಿರ್ದೇಶಕ, ನಿರ್ಮಾಪಕ ವಿ.ರವಿಚಂದ್ರನ್ ಅವರ ತಾಯಿ ಪಟ್ಟಮ್ಮಾಳ್ ವೀರಸ್ವಾಮಿ (83) ಇಂದು ನಿಧನರಾಗಿದ್ದು, ಸಂಜೆ ಅಂತ್ಯಕ್ರಿಯೆ ನಡೆಯಲಿದೆ.

ರವಿಚಂದ್ರನ್ ಅವರ ನಿವಾಸಕ್ಕೆ ಮೃತದೇಹ ತಂದು ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುವುದು. ಸಂಜೆ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.

ವಯೋಸಹಜ ಅನಾರೋಗ್ಯದಿಂದ ರಾಜಾಜಿನಗರದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಪಟ್ಟಮ್ಮಾಳ್ ವೀರಸ್ವಾಮಿ ಅವರು ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದಾರೆ.

ನಟರಾದ ರವಿಚಂದ್ರನ್, ಬಾಲಾಜಿ ಮತ್ತು ಮೂವರು ಹೆಣ್ಣು ಮಕ್ಕಳು ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.