ಮೈಸೂರಿನಲ್ಲಿ ನೂತನ ನಗರ ಕೇಂದ್ರ ಗ್ರಂಥಾಲಯ ಉದ್ಘಾಟಿಸಿದ ಎಸ್.ಟಿ ಸೋಮಶೇಖರ್…

ಮೈಸೂರು,ಸೆಪ್ಟೆಂಬರ್,18,2020(www.justkannada.in) : ಮೈಸೂರಿನ ನಜರ್ ಬಾದ್ ನ ಪೀಪಲ್ಸ್ ಪಾರ್ಕ್ ನಲ್ಲಿ ನೂತನವಾಗಿ ನಿರ್ಮಿಸಲಾದ ನಗರ ಕೇಂದ್ರ ಗ್ರಂಥಾಲಯವನ್ನು ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಹಾಗೂ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಉದ್ಘಾಟಿಸಿದರು.Urban-Center-People's Park-inauguration-library

 

ಬಳಿಕ ಡಿಜಿಟಲ್ ಗ್ರಂಥಾಲಯ ವಿಭಾಗವನ್ನು ಕಂಪ್ಯೂಟರ್ ಮೂಲಕ ವೀಕ್ಷಣೆ ಮಾಡುವ ಮೂಲಕ ಚಾಲನೆ ನೀಡಲಾಯಿತು. ಪುಸ್ತಕಗಳು, ಅಧ್ಯಯನ ವಿಭಾಗ ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗಳ ಅಧ್ಯಯನ ವಿಭಾಗಳನ್ನು ವೀಕ್ಷಿಸಿದರು. ಜೊತೆಗೆ ಪುಸ್ತಕಗಳ ಸಂಗ್ರಹಣೆ ಹಾಗೂ ವಿಷಯಗಳ ಬಗ್ಗೆ ಗಮನಹರಿಸಿದರು.

rbancenterpeoples-parkinaugurationlibrary

ಶಾಸಕರಾದ ಎಲ್.ನಾಗೇಂದ್ರ, ಎಸ್.ಎ.ರಾಮದಾಸ್,  ಹರ್ಷವರ್ಧನ್, ಜಿ.ಟಿ.ದೇವೇಗೌಡ, ಜಿಲ್ಲಾಧಿಕಾರಿ  ಬಿ.ಶರತ್, ಮೇಯರ್ ತಸ್ನಿಂ, ಪಾಲಿಕೆ ಆಯುಕ್ತ ಗುರುದತ್ತ ಹೆಗಡೆ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Urban-Center-People's Park-inauguration-library

key words : Urban-Center-People’s Park-inauguration-library