Saturday, August 1, 2026

BDA Apartments

Home Front Page ಆರ್ ಸಿಬಿ ವಿಜಯಯಾತ್ರೆ: ಯಾವುದೇ ತೊಂದರೆ ಆಗದಂತೆ ನೋಡಿಕೊಳ್ಳಿ- ಸಿಎಂ ಸಿದ್ದರಾಮಯ್ಯ ಸೂಚನೆ

ಆರ್ ಸಿಬಿ ವಿಜಯಯಾತ್ರೆ: ಯಾವುದೇ ತೊಂದರೆ ಆಗದಂತೆ ನೋಡಿಕೊಳ್ಳಿ- ಸಿಎಂ ಸಿದ್ದರಾಮಯ್ಯ ಸೂಚನೆ

ಬೆಂಗಳೂರು,ಜೂನ್,4,2025 (www.justkannada.in):  ಐಪಿಎಲ್ ಟ್ರೋಫಿ ಜಯಿಸಿದ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಆರ್ ಸಿಬಿ ತಂಡದಿಂದ  ವಿಜಯಯಾತ್ರೆ ಆಯೋಜಿಸಿದ್ದು, ಈ ಪರೇಡ್ ವೇಳೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ ಎಂದು ಪೊಲೀಸ್ ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.

ಐಪಿಎಲ್ 18 ನೇ ಆವೃತ್ತಿಯಲ್ಲಿ ಮೊಟ್ಟಮೊದಲ ಬಾರಿಗೆ  ಆರ್ ಸಿಬಿ ತಂಡ ಚಾಂಪಿಯನ್ಸ್ ಆಗಿ ಹೊರಹೊಮ್ಮಿದ್ದು, ಈ ಹಿನ್ನೆಲೆಯಲ್ಲಿ  ಆರ್‌ಸಿಬಿ ಆಟಗಾರರಿಗೆ ಅಭಿನಂದನೆ ಸಲ್ಲಿಸಲು ಇಂದು ಬೆಂಗಳೂರಿನ ವಿಧಾನಸೌಧದಲ್ಲಿ ಗ್ರಾಂಡ್ ಸ್ಟೆಪ್ ಮೇಲೆ ಈಗಾಗಲೇ ಸಿಬ್ಬಂದಿಗಳು ವೇದಿಕೆಯನ್ನು ಸಿದ್ಧಪಡಿಸುತ್ತಿದ್ದಾರೆ. ಸರ್ಕಾರದಿಂದ ಆರ್‌ಸಿಬಿ ಆಟಗಾರರಿಗೆ ಗೌರವ ನೀಡಲು ಸಿದ್ಧತೆ ನಡೆಸಿದೆ. ಈ ಮಧ್ಯೆ ಸಂಜೆ 5 ಗಂಟೆಗೆ  ವಿಜಯಯಾತ್ರೆ ನಡೆಯಲಿದ್ದು ಈ ಹಿನ್ನೆಲೆಯಲ್ಲಿ ಬೆಂಗಳೂರು ನಗರ ಪೊಲೀಸ್ ಕಮಿಷನರ್ ಕಚೇರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.

ಪರೇಡ್ ವೇಳೆ ಯಾವುದೇ ಸಮಸ್ಯೆ ಆಗಬಾರದು.  ಸಂಭ್ರಮಾಚರಣೆ ವೇಳೆ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಬರುತ್ತಾರೆ. ಹೀಗಾಗಿ  ಅಟಗಾರರು ಅಭಿಮಾನಿಗಳಿಗೆ ಯಾವುದೇ ತೊಂದರೆ ಆಗಬಾರದು ಪರೇಡ್ ವೇಳೆ ಸವಾರರಿಗೂ ಸಮಸ್ಯೆ ಆಗದಂತೆ ನೋಡಿಕೊಳ್ಳಿ . ವಿಧಾನಸೌಧ ಚಿನ್ನಸ್ವಾಮಿ ಕ್ರೀಡಾಂಗಣದ ಸುತ್ತ ಟ್ರಾಫಿಕ್ ನಿಭಾಯಿಸಿ ಎಂದು ಡಿಜಿ ಮತ್ತು ಐಜಿಪಿ ಸಲೀಂ ಹಾಗೂ ಸಂಚಾರಿ ಜಂಟಿ ಆಯುಕ್ತ ಎಂ ಎನ್ ಅನುಚೆತ್ ಅವರಿಗೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದರು.vtu

Key words: RCB, Vijay Yatra, CM Siddaramaiah, instructs