ಡೆಲ್ಲಿ ವಿರುದ್ಧ ಗೆದ್ದು ಅಂಕಪಟ್ಟಿಯಲ್ಲಿ ಮತ್ತೆ ನಂಬರ್ 1 ಸ್ಥಾನಕ್ಕೇರಿದ ಆರ್’ಸಿಬಿ

ಬೆಂಗಳೂರು, ಏಪ್ರಿಲ್ 28, 2021 (www.justkannada.in): 

ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಆರ್ಸಿಬಿ 1 ರನ್  ರೋಚಕ ಗೆದ್ದು ಅಂಕ ಪಟ್ಟಿಯಲ್ಲಿ ಮತ್ತೆ ನಂಬರ್ ಸ್ಥಾನಕ್ಕೇರಿದೆ.

ಸತತ 4 ಪಂದ್ಯಗಳಲ್ಲಿ ಗೆದ್ದಿದ್ದ ಕೊಹ್ಲಿ ಪಡೆ  ಚೆನ್ನೈ ವಿರುದ್ಧದ ಪಂದ್ಯದಲ್ಲಿ ಸೋಲು ಕಂಡಿತ್ತು. ಇದೀಗ ಆರ್ಸಿಬಿ ಮತ್ತೆ ಗೆಲುವಿನ ಹಳಿಗೆ ಮರಳಿದೆ.

ನಿನ್ನೆ ಎಬಿ ಡಿ ವಿಲಿಯರ್ಸ್ ಭರ್ಜರಿ ಬ್ಯಾಟಿಂಗ್‌, ಹರ್ಷಲ್ ಪಟೇಲ್, ಮೊಹಮ್ಮದ್ ಸಿರಾಜ್ ಬೌಲಿಂಗ್ ನೆರವಿನಿಂದ ಆರ್‌ಸಿಬಿ 5ನೇ ಜಯ ದಾಖಲಿಸಿದೆ.

ಆರ್‌ಸಿಬಿ ಖಾತೆಯಲ್ಲೀಗ ಒಟ್ಟು 10 ಪಾಯಿಂಟ್ಸ್‌ ಇದೆ. ದ್ವಿತೀಯ ಸ್ಥಾನದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡ ಇದೆ. ಆರ್‌ಸಿಬಿ ತಂಡ ಏಪ್ರಿಲ್ 30ರಂದು ಪಂಜಾಬ್ ಕಿಂಗ್ಸ್‌ ವಿರುದ್ಧ ಸೆಣೆಸಾಡಳಿದೆ.