ಸರ್ಕಾರದ ಹಿತದೃಷ್ಠಿಯಿಂದ  ಯಾವುದೇ ತ್ಯಾಗಕ್ಕೂ ಸಿದ್ಧ- ಸಚಿವ ಡಿ.ಕೆ ಶಿವಕುಮಾರ್…

ಬೆಂಗಳೂರು,ಜು,8,2019(www.justkannada.in):  13 ಮಂದಿ ಅತೃಪ್ತ ಶಾಸಕರ ರಾಜೀನಾಮೆಯಿಂದ ಸಂಕಷ್ಟಕ್ಕೆ ಸಿಲುಕಿರುವ ರಾಜ್ಯ ಸಮ್ಮಿಶ್ರ ಸರ್ಕಾರವನ್ನ ಉಳಿಸಿಕೊಳ್ಳಲು ದೋಸ್ತಿ ಪಕ್ಷದ ನಾಯಕರು ಇನ್ನಿಲ್ಲದ ಕಸರತ್ತು ನಡೆಸುತ್ತಿದ್ದು, ಈ ನಡುವೆ ಇಂದು ಡಿಸಿಎಂ ಪರಮೇಶ್ವರ್ ನಿವಾಸದಲ್ಲಿ ಉಪಹಾರ ಕೂಟ ಏರ್ಪಡಿಸಿ ಚರ್ಚಿಸಿ ಕಾಂಗ್ರೆಸ್ ಎಲ್ಲಾ ಸಚಿವರು ರಾಜೀನಾಮೆ ನೀಡಲು ಮುಂದಾಗಿದ್ದಾರೆ.

ಡಿಸಿಎಂ ಪರಮೇಶ್ವರ್ ನಿವಾಸದಲ್ಲಿ ಕಾಂಗ್ರೆಸ್ ಸಚಿವರಿಗೆ ಉಪಹಾರ ಕೂಟ ಏರ್ಪಡಿಸಲಾಗಿತ್ತು. ಉಪಹಾರ ಕೂಟದ ಬಳಿಕ ಮಾಧ್ಯಮಗಳ ಜತೆ ಮಾತನಾಡಿದ ಸಚಿವ ಡಿ.ಕೆ ಶಿವಕುಮಾರ್ ಸಮ್ಮಿಶ್ರ ಸರ್ಕಾರದ  ಹಿತದೃಷ್ಠಿಯಿಂದ ನಾವು ಯಾವುದೇ ತ್ಯಾಗಕ್ಕೂ ಸಿದ್ಧರಿದ್ದೇವೆ. ಸರ್ಕಾರ ಹಾಗೂ ಸಿಎಂ ಕೈ ಬಲಪಡಿಸುತ್ತೇವೆ ಎಂದು ತಿಳಿಸಿದ್ದಾರೆ.

ಇನ್ನು  ಬೇರೆಯವರಿಗೆ ಸಚಿವ ಸ್ಥಾನ ನೀಡಲು ಮುಂದಾಗಿದ್ದೇವೆ. ಬೇರೆಯವರಿಗೆ ಹಾದಿ ಮಾಡಿಕೊಳ್ಳಲು ನಾನು ಸಿದ್ಧರಿದ್ದೇವೆ. ಇದಕ್ಕಾಗಿ ನಾವು ಯಾವುದೇ ತ್ಯಾಗಕ್ಕೂ ರೆಡಿ ಎಂದು ಸಚಿವ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.

 

Key words: Ready -any sacrifice – government – Minister- DK Sivakumar.