Thursday, August 13, 2026

BDA Apartments

Home Front Page ಬಂಡಾಯ ಅಭ್ಯರ್ಥಿಗಳು ನಾಮಪತ್ರ ವಾಪಸ್ ಪಡೆಯಲಿದ್ದಾರೆ- ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್.

ಬಂಡಾಯ ಅಭ್ಯರ್ಥಿಗಳು ನಾಮಪತ್ರ ವಾಪಸ್ ಪಡೆಯಲಿದ್ದಾರೆ- ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್.

ಉಡುಪಿ,ಏಪ್ರಿಲ್,24,2023(www.justkannada.in):  ಕಾಂಗ್ರೆಸ್ ನಿಂದ ಟಿಕೆಟ್ ಸಿಗದೆ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿರುವವರು ನಾಮಪತ್ರ ವಾಪಸ್ ಪಡೆಯಲಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಉಡುಪಿ ಜಿಲ್ಲೆ ಬೈಂದೂರು ತಾಲ್ಲೂಕಿನ ಕೊಲ್ಲೂರಿನಲ್ಲಿ ಮಾತನಾಡಿದ ಡಿ.ಕೆ ಶಿವಕುಮಾರ್,  ಬಂಡಾಯ ಅಭ್ಯರ್ಥಿಗಳು ನಾಮಪತ್ರ ವಾಪಸ್ ಪಡೆಯಲಿದ್ದಾರೆ. ಹಲವು ಕ್ಷೇತ್ರಗಳಲ್ಲಿ ಬಂಡಾಯ ಎದ್ದಿದ್ದ ನಾಯಕರ ಮನವೊಲಿಕೆ ಮಾಡಲಾಗಿದೆ.  ಇಂದು ಬಂಡಾಯ ಅಭ್ಯರ್ಥಿಗಳು ನಾಮಪತ್ರ ವಾಪಸ್ ಪಡೆಯಲಿದ್ದಾರೆ ಎಂದು ತಿಳಿಸಿದರು.

ಕರ್ನಾಟಕಲ್ಲಿ ಅತಿ ಭ್ರಷ್ಟ ಸರ್ಕಾರ ಅಂದರೇ ಬಿಜೆಪಿ ಸರ್ಕಾರ.  ಅವರದ್ಧೇ ಪಕ್ಷದ ಆನೇಕ ನಾಯಕರು ಭ್ರಷ್ಟಾಚಾರದ ಬಗ್ಗೆ ಹೇಳಿದ್ದಾರೆ. 40 ಪರ್ಸೆಂಟ್ ಸರ್ಕಾರವನ್ನ ಕಿತ್ತೊಗೆಯಬೇಕು.  ಭ್ರಷ್ಟಾಚಾರ ನಿರ್ಮೂಲನೆ ಮಾಡುವುದು ನಮ್ಮ ಗುರಿ.  ಬಿಜೆಪಿಯ ಹಿಂದುತ್ವದ ಹೋರಾಟ ಫಲ ಕೊಡಲ್ಲ.  ನಾವು ಜನರ ಬದುಕಿನ ಬಗ್ಗೆ ಮಾತನಾಡುತ್ತೇವೆ  ಬಿಜೆಪಿಯವರು ಜನರ ಭಾವನೆಗಳ ಬಗ್ಗೆ ಮಾತನಾಡುತ್ತಾರೆ ಎಂದು ಕಿಡಿಕಾರಿದರು.

ಸಿಎಂ ಅಭ್ಯರ್ಥಿ ವಿಚಾರವಾಗಿ ಮಾತನಾಡಿದ ಡಿ.ಕೆ ಶಿವಕುಮಾರ್, ನಾವು ರಾಜಕಾರಣಿಗಳು ಖಾವಿ ಹಾಕಿಲ್ಲ. ಬಿಳಿ ಬಟ್ಟೆ ಹಾಕಿದ್ದೇವೆ ಎಂದು ಮಾರ್ಮಿಕ ಉತ್ತರ ನೀಡಿದರು.

Key words: Rebel -candidates – nomination- back-KPCC President -DK Shivakumar.