Wednesday, July 29, 2026

BDA Apartments

Home Front Page ಎಸ್ ಪಿ ಬಾಲಸುಬ್ರಮಣ್ಯಂ ಅವರ ಆರೋಗ್ಯದಲ್ಲಿ ಚೇತರಿಕೆ ; ಎಸ್.ಪಿ.ಚರಣ್ ಮಾಹಿತಿ

ಎಸ್ ಪಿ ಬಾಲಸುಬ್ರಮಣ್ಯಂ ಅವರ ಆರೋಗ್ಯದಲ್ಲಿ ಚೇತರಿಕೆ ; ಎಸ್.ಪಿ.ಚರಣ್ ಮಾಹಿತಿ

ಬೆಂಗಳೂರು, ಸೆಪ್ಟೆಂಬರ್, 04, 2020(www.justkannda.in) ; ಗಾಯಕ ಎಸ್ ಪಿ ಬಾಲಸುಬ್ರಮಣ್ಯಂ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿರುವುದಾಗಿ ಎಸ್ ಪಿ ಬಾಲಸುಬ್ರಮಣ್ಯಂ ಪುತ್ರ  ಎಸ್.ಪಿ.ಚರಣ್ ಅವರು ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ನೀಡಿದ್ದಾರೆ.

jk-logo-justkannada-logo

ಚೆನೈನ ಖಾಸಗಿ ಆಸ್ಪತ್ರೆಯಲ್ಲಿ ಕೊವಿಡ್-19 ಸೋಂಕಿಗೆ ಚಿಕಿತ್ಸೆ ಪಡೆಯುತ್ತಿರುವ ಅವರ ಆರೋಗ್ಯದಲ್ಲಿ ಗಣನೀಯ ಸುಧಾರಣೆ ಕಂಡುಬಂದಿದೆ. ಕಳೆದ 4 ದಿನಗಳಿಂದ ತಂದೆಯವರು ಉತ್ತಮವಾಗಿ ಚೇತರಿಸಿಕೊಳ್ಳುತ್ತಿದ್ದು, ಈ ವಾರಾಂತ್ಯದಲ್ಲಿ ಒಂದು ಒಳ್ಳೆಯ ಸುದ್ದಿ ನಮಗೆ ಸಿಗಬಹುದು ಅಥವಾ ಸೋಮವಾರಂದು ಆ ಸುದ್ದಿ ಸಿಗುವ ನಿರೀಕ್ಷೆಯಿದೆ. ಆ ಸುದ್ದಿಗಾಗಿ ಬಕಪಕ್ಷಿಯಂತೆ ಕಾಯುತ್ತಿದ್ದೇನೆ ಎಂದು ಸಂತೋಷಹಂಚಿಕೊಂಡಿದ್ದಾರೆ.

Recovery-health-S.P.Balasubramaniam-s.p.Charan-Information

ಆಸ್ಪತ್ರೆಯ ವೈದ್ಯರು ಅವರ ಆರೋಗ್ಯ ಕುರಿತು ಬುಲೆಟಿನ್ ಬಿಡುಗಡೆ ಮಾಡಿದ್ದು, ಅವರಿಗೆ ವೆಂಟಿಲೇಟರ್ ಹಾಗೂ ಎಕ್ಮೋ ಸಪೋರ್ಟ್ ಮೂಲಕ ಚಿಕಿತ್ಸೆ ಮುಂದುವರಿಸಲಾಗಿದೆ. ಎಸ್ ಪಿ ಬಿ ಆರೋಗ್ಯ ಸ್ಥಿರವಾಗಿದೆ ಮತ್ತು ಚಿಕಿತ್ಸೆಗೆ ಉತ್ತಮವಾಗಿ ಸ್ಪಂದಿಸುತ್ತಿದ್ದಾರೆ. ಚೇತರಿಕೆ ಸ್ಪಷ್ಟವಾಗಿ ಕಾಣಿಸುತ್ತಿದೆ. ಆಸ್ಪತ್ರೆಯ ಮಲ್ಟಿ ಡಿಸಿಪ್ಲಿನರಿ ಕ್ಲಿನಿಕಲ್ ಟೀಮಿನ ನೇತೃತ್ವದಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿಸಿದ್ದಾರೆ.

key words ; Recovery-health-S.P.Balasubramaniam-s.p.Charan-Information