ಬೆಂಗಳೂರು,ಆಗಸ್ಟ್,30,2025 (www.justkannada.in): ನೋಂದಣಿ ಮತ್ತು ಮುದ್ರಾಂಕ ಶುಲ್ಕ ಪರಿಷ್ಕರಣೆ ಮಾಡಲಾಗಿದ್ದು ನಾಳೆಯಿಂದ ಜಾರಿ ಸ್ಥಿರಾಸ್ತಿ ಮೇಲಿನ ವ್ಯವಹಾರ ದಸ್ತಾವೇಜುಗಳಿಗೆ ವಿಧಿಸುತ್ತಿರುವ ನೋಂದಣಿ ಮತ್ತು ಮುದ್ರಾಂಕ ಶುಲ್ಕ ನಾಳೆಯಿಂದ ಹೆಚ್ಚಳವಾಗಲಿದೆ.
ಈ ಕುರಿತು ಮಾಧ್ಯಮ ಪ್ರಕಟಣೆ ಹೊರಡಿಸಿರುವ ನೋಂದಣಿ ಮತ್ತು ಮುದ್ರಾಂಕ ಇಲಾಖೆ ಆಯುಕ್ತ ಮುಲೈ ಮುಗಿಲನ್, ಕರ್ನಾಟಕ ರಾಜ್ಯ ಸರ್ಕಾರವು ಆಗಸ್ಟ್ ,31 ರಿಂದ ಜಾರಿಗೊಳಿಸುತ್ತಿರುವ ಸ್ಥಿರಾಸ್ತಿ ಮೇಲಿನ ವ್ಯವಹಾರಗಳ ದಸ್ತಾವೇಜುಗಳಿಗೆ ವಿಧಿಸುತ್ತಿರುವ ನೋಂದಣಿ ಮತ್ತು ಮುದ್ರಾಂಕ ಶುಲ್ಕವು ನೆರೆಹೊರೆಯ ರಾಜ್ಯಗಳಲ್ಲಿರುವ ದರಗಳಿಗಿಂತ ಪ್ರಸ್ತುತ ಕಡಿಮೆ ಶುಲ್ಕ ಇದ್ದು, ಅದನ್ನು ಇತರೆ ರಾಜ್ಯಗಳ ಶುಲ್ಕಗಳೊಂದಿಗೆ ಸಮೀಕರಣ ಮಾಡಿ ಪರಿಷ್ಕರಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.
ಮುದ್ರಾಂಕ ,ನೋಂದಣಿ ಹಾಗೂ ಇತರೆ ಸೆಸ್ ಸೇರಿ ಕರ್ನಾಟಕ ರಾಜ್ಯವು ಶೇ.6.6 ರಷ್ಟು ವಿಧಿಸುತ್ತಿತ್ತು. ಇದೇ ಅವಧಿಯಲ್ಲಿ ಈ ಶುಲ್ಕವು ತಮಿಳುನಾಡು ರಾಜ್ಯದಲ್ಲಿ ಶೇ.9, ಕೇರಳ ಶೇ.10, ಆಂಧ್ರಪ್ರದೇಶ ಶೇ. 7.5,ತೆಲಂಗಾಣ ರಾಜ್ಯಗಳು ಶೇ.7.5 ರಷ್ಟು ಶುಲ್ಕ ಆಕರಿಸುತ್ತಿವೆ.
ದಸ್ತಾವೇಜುಗಳ ಮೇಲಿನ ಮುದ್ರಾಂಕ ಶುಲ್ಕ ಮತ್ತು ನೋಂದಣಿ ಶುಲ್ಕಗಳನ್ನು ಇತರೆ ರಾಜ್ಯಗಳೊಂದಿಗೆ ಸಮೀಕರಿಸಿಗೊಳ್ಳಲು ಆಡಳಿತಾತ್ಮಕ ಪ್ರಕ್ರಿಯೆಗಳನ್ನು ಬಲಪಡಿಸಲು ಮತ್ತು ನಾಗರಿಕರಿಗೆ ಉತ್ತಮ ಹಾಗೂ ಪರಿಣಾಮಕಾರಿ ಸೇವೆಯನ್ನು ನೀಡಲು. ರಾಜ್ಯ ಸರ್ಕಾರವು ದಿನಾಂಕ: 31-08-2025 ರಿಂದ ಜಾರಿಗೆ ಬರುವಂತೆ ನೋಂದಣಿ ಶುಲ್ಕವನ್ನು ಶೇಕಡ 1 ರಿಂದ ಶೇ.2 ರಷ್ಟು ಪರಿಷ್ಕರಿಸಿದೆ ಎಂದು ತಿಳಿಸಿದ್ದಾರೆ.
Key words: Registration and Stamp, Fee, Revision, tomorrow