Tuesday, September 29, 2026

BDA Apartments

ವಾರದೊಳಗೆ ಬಿಜೆಪಿ ಚುನಾವಣಾ ಪ್ರಣಾಳಿಕೆ ಬಿಡುಗಡೆ- ಸಚಿವ ಡಾ.ಕೆ. ಸುಧಾಕರ್ BDA JK_Adv...
Home Front Page ವಾರದೊಳಗೆ ಬಿಜೆಪಿ ಚುನಾವಣಾ ಪ್ರಣಾಳಿಕೆ ಬಿಡುಗಡೆ- ಸಚಿವ ಡಾ.ಕೆ. ಸುಧಾಕರ್

ವಾರದೊಳಗೆ ಬಿಜೆಪಿ ಚುನಾವಣಾ ಪ್ರಣಾಳಿಕೆ ಬಿಡುಗಡೆ- ಸಚಿವ ಡಾ.ಕೆ. ಸುಧಾಕರ್

ಬೆಂಗಳೂರು,ಏಪ್ರಿಲ್,10,2023(www.justkannada.in):  ರಾಜ್ಯ ವಿಧಾನಸಭೆ ಚುನಾವಣೆ ಮತದಾನಕ್ಕೆ ಇನ್ನು ಒಂದು ತಿಂಗಳು ಬಾಕಿ ಇದ್ದು ಈ ನಡುವೆ ಮುಂದಿನ ವಾರ ಬಿಜೆಪಿ ಪ್ರಣಾಳಿಕೆ ಬಿಡುಗಡೆ ಮಾಡುವುದಾಗಿ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.

ಇಂದು ಈ ಕುರಿತು ಮಾತನಾಡಿದ ಸಚಿವ ಸುಧಾಕರ್, ಪ್ರಣಾಳಿಕೆ ಸಂಬಂಧ ವಿಭಾಗ, ಜಿಲ್ಲೆ, ತಾಲೂಕುವಾರು ಸಭೆಗಳು ಆಗಿವೆ. ರಾಜ್ಯ ಹಾಗೂ ದೇಶಕ್ಕೆ ನಮ್ಮ ಪ್ರಣಾಳಿಕೆ ಮಾದರಿಯಾಗಲಿದೆ. ಹೊಸತನ, ಬದುಕು ಕಟ್ಟಿಕೊಡುವ ರೀತಿ ಪ್ರಣಾಳಿಕೆ ಇರಲಿದೆ ಎಂದು ತಿಳಿಸಿದರು.ವಾರದೊಳಗೆ ಬಿಜೆಪಿ ಚುನಾವಣಾ ಪ್ರಣಾಳಿಕೆ ಬಿಡುಗಡೆ sudhakar sudhakar 1

ಅಂಗೈಯಲ್ಲಿ ಚಂದ್ರ ತೋರಿಸುವ ಕೆಲಸ ಅಂತೂ ಮಾಡಲ್ಲ. ನಮ್ಮ ಆರ್ಥಿಕ ಪರಿಸ್ಥಿತಿ, ಶಕ್ತಿ ತೋರಿಸಲಿದೆ. ರಾಮ ರಾಜ್ಯದ ಅಡಿಯಲ್ಲಿ ಪರಿಕಲ್ಪನೆಗೆ ಪೂರಕ ಇರಲಿದೆ. ಗ್ರೇಟರ್ ಬೆಂಗಳೂರು, ಕಿತ್ತೂರು, ಕಲ್ಯಾಣ ಕರ್ನಾಟಕ, ಬಯಲು ಸೀಮೆ ಹೀಗೆ ವಲಯವಾರು ಪ್ರಣಾಳಿಕೆ ಮಾಡಲಿದ್ದೇವೆ ಸಚಿವ ಸುಧಾಕರ್ ಮಾಹಿತಿ ನೀಡಿದರು.

Key words: Release – BJP -election -manifesto –within- week- Minister -Dr. K. Sudhakar