ಜಾತಿಗಣತಿ ವರದಿ ಬಿಡುಗಡೆಗೆ ಪ್ರಯತ್ನ ಮಾಡಲಾಗಿತ್ತು; ಆದ್ರೆ ಹೆಚ್.ಡಿಕೆ ಅವಕಾಶ ನೀಡಲಿಲ್ಲ- ಮಾಜಿ ಸಿಎಂ ಸಿದ್ಧರಾಮಯ್ಯ.

ಬೆಂಗಳೂರು,ಸೆಪ್ಟಂಬರ್,25,2021(www.justkannada.in): ಜಾತಿಗಣತಿ ವರದಿ ಬಿಡುಗಡೆಗೆ ಪ್ರಯತ್ನ ಮಾಡಲಾಗಿತ್ತು. ಆಗ ಹಿಂದುಳಿದ ವರ್ಗಗಳ ಸಚಿವರಾಗಿದ್ದ ಪುಟ್ಟರಂಗಶೆಟ್ಟಿ ಬಿಡುಗಡೆ ಮಾಡಲು ಯತ್ನಿಸಿದ್ದರು ಆದರೆ. ಹೆಚ್.ಡಿ ಕುಮಾರಸ್ವಾಮಿ ಹೆದರಿಸಿ ಬಿಟ್ಟಿದ್ದರು. ಅವರಿಗೆ ಹೆದರಿ ವರದಿ ಬಿಡುಗಡೆ ಗೋಜಿಗೆ ಹೋಗಲಿಲ್ಲ ಎಂದು ಮಾಜಿ ಸಿಎಂ ಸಿದ್ಧರಾಮಯ್ಯ ಹೇಳಿದರು.

ಜಾತಿಗಣತಿ ವರದಿ ಬಿಡುಗಡೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಮಾಜಿ ಸಿಎಂ ಸಿದ್ಧರಾಮಯ್ಯ, ಜಾತಿ‌ ಸಮೀಕ್ಷೆ ನಾನು ಮುಖ್ಯಮಂತ್ರಿ ಆಗಿದ್ದಾಗ ಪೂರ್ಣ ಆಗಿರಲಿಲ್ಲ. ಹೆಚ್.​ಡಿ. ಕುಮಾರಸ್ವಾಮಿ ಮುಖ್ಯಮಂತ್ರಿ ಆಗಿದ್ದಾಗ ಜಾತಿ‌ ಸಮೀಕ್ಷೆ ಪೂರ್ಣವಾಗಿತ್ತು. ಆಗ ಪುಟ್ಟರಂಗಶೆಟ್ಟಿ ಹಿಂದುಳಿದ ವರ್ಗಗಳ ಸಚಿವರಾಗಿದ್ದರು. ವರದಿ ಪೂರ್ಣವಾಗಿದೆ ಎಂದು ನನಗೆ ಮಾಹಿತಿ ನೀಡಿದರು. ಜಾತಿ ಗಣತಿ ಬಿಡುಗಡೆಗೆ ಪುಟ್ಟರಂಗಶೆಟ್ಟಿ ಪ್ರಯತ್ನ ಮಾಡಲು ಹೋಗಿದ್ದರು. ಆದರೆ ಆಗ ಹೆಚ್.ಡಿ. ಕುಮಾರಸ್ವಾಮಿ ಬಿಡುಗಡೆ ಮಾಡಲಿಲ್ಲ ಎಂದು ತಿಳಿಸಿದರು.

ಇದನ್ನು ನಾನು ಹೇಳಿದರೆ ಕುಮಾರಸ್ವಾಮಿಗೆ ಕೋಪ ಬರುತ್ತೆ. ಸಿದ್ದರಾಮಯ್ಯ ಕೂತ್ಕೊಂಡು ಬರೆಸಿಬಿಟ್ಟಿದ್ದಾನೆ ಎನ್ನುತ್ತಾರೆ. ಅದು ಎಲ್ಲಾ ವರ್ಗದ ಜನರ ಸರ್ವೆ.  ಯಾರಿಗೂ ಅನ್ಯಾಯ ಮಾಡುವ ಉದ್ದೇಶ ಇಲ್ಲ ಎಂದು  ಮಾಜಿ ಸಿಎಂ ಸಿದ್ದರಾಮಯ್ಯ ತಿಳಿಸಿದರು.

Key words: release –caste-census –Report-H.D. kumaraswamy-not allowed-Former CM -Siddaramaiah.