Sunday, August 23, 2026

BDA Apartments

Home Front Page ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ಬಂದ್.

ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ಬಂದ್.

ಮಂಡ್ಯ,ಆಗಸ್ಟ್,25,2023(www.justkannada.in): ಕೆಆರ್ ಎಸ್ ಜಲಾಶಯದಿಂದ ತಮಿಳುನಾಡಿಗೆ ಕಾವೇರಿ ನೀರನ್ನ ಹರಿಸುವುದನ್ನ ಬಂದ್ ಮಾಡಲಾಗಿದೆ.

ರಾಜ್ಯದಲ್ಲಿ ಸರಿಯಾಗಿ ಮಳೆಯಾಗದೇ ಜಲಾಶಯ ಭರ್ತಿಯಾಗದಿದ್ದರೂ ತಮಿಳುನಾಡಿಗೆ ನೀರು ಹರಿಸುತ್ತಿರುವುದಕ್ಕೆ ರಾಜ್ಯಸರ್ಕಾರದ ವಿರುದ್ಧ ರೈತರು ಪ್ರತಿಭಟನೆ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದರು. ರೈತರ ಹೋರಾಟಕ್ಕೆ ಮಣಿದ ಸರ್ಕಾರ ನಿನ್ನೆ ಸಂಜೆಯಿಂದ ತಮಿಳುನಾಡಿಗೆ ನೀರುಹರಿಸುವುದನ್ನ ನಿಲ್ಲಿಸಿದೆ.

ಈವರೆಗೆ ತಮಿಳುನಾಡಿಗೆ 10 ಟಿಎಂಸಿ ನೀರು ಹರಿಸಲಾಗಿದೆ. ಕಳೆದ 15 ದಿನಗಳ ಹಿಂದೆ ಕೆಆರ್ ಎಸ್ ಡ್ಯಾಂ ನಲ್ಲಿ 113  ಅಡಿ ನೀರಿತ್ತು. ಪ್ರಸ್ತುತ 102 ಅಡಿಗೆ ನೀರಿನ ಮಟ್ಟ ಕುಸಿದಿದೆ. ಈಗ 10 ಟಿಎಂಸಿಯಷ್ಟು ನೀರು ಖಾಲಿಯಾಗಿದೆ.

Key words: Release – Cauvery water – Tamil Nadu – banned.